ಮಡಿಕೇರಿ: ಸುಂಟಿಕೊಪ್ಪದ ಎಸ್.ಎಸ್.ಇಂಟರ್ನ್ಯಾಷನಲ್ ಸಭಾಂಗಣದಲ್ಲಿ ಮೇ 29 ಮತ್ತು 30ರಂದು 17ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ.

ಈಗಾಗಲೇ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಸಾಹಿತಿ ಅಬ್ದುಲ್ ರಶೀದ್ ಅವರನ್ನು ಆಯ್ಕೆ ಮಾಡಲಾಗಿದೆ. 29ರಂದು ಬೆಳಿಗ್ಗೆ 8 ಗಂಟೆಗೆ ರಾಷ್ಟ್ರಧ್ವಜ, ನಾಡಧ್ವಜ ಮತ್ತು ಪರಿಷತ್ತಿನ ಧ್ವಜದ ಆರೋಹಣದೊಂದಿಗೆ ಸಮ್ಮೇಳನ ಪ್ರಾರಂಭವಾಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಕೊಡಗು ಜಿಲ್ಲಾ ಘಟಕದ ಅಧ್ಯಕ್ಷ ಎಂ.ಪಿ.ಕೇಶವಕಾಮತ್ ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಬೆಳಿಗ್ಗೆ 9 ಗಂಟೆಗೆ ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಮುಖ್ಯ ರಸ್ತೆಗಾಗಿ ಅಯ್ಯಪ್ಪ ದೇವಾಲಯದ ಮುಖಾಂತರ ಗದ್ದೆ ಹಳ್ಳದ ಎಸ್ ಎಸ್ ಇಂಟರನ್ಯಾಷನಲ್ ಹಾಲ್ನಲ್ಲಿ ನಿರ್ಮಿಸಲಾಗಿರುವ ಗುಂಡುಗುಟ್ಟಿ ಮಂಜನಾಥಯ್ಯ ಸಭಾಂಗಣದವರೆಗೆ ವಿವಿಧ ಕಲಾತಂಡಗಳು ಸಮ್ಮೇಳನ ಅಧ್ಯಕ್ಷರನ್ನು ಮೆರವಣಿಗೆಯಲ್ಲಿ ಕರೆತರಲಿದ್ದಾರೆ ಎಂದು ಹೇಳಿದರು.

ಬೆಳಿಗ್ಗೆ 10.30ಕ್ಕೆ ಶಾಸಕ ಡಾ.ಮಂತರ್ಗೌಡ ಸಮ್ಮೇಳನ ಉದ್ಘಾಟಿಸಲಿದ್ದು, ಸ್ಮರಣ ಸಂಚಿಕೆ ‘ಸಾಹಿತ್ಯ ಸೌಹಾರ್ದ’ವನ್ನು ಸಚಿವ ಎನ್.ಎಸ್ ಬೋಸರಾಜು ಬಿಡುಗಡೆಗೊಳಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ, ಮುಖ್ಯಮಂತ್ರಿಯ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಉಪಸ್ಥಿತರಿರುತ್ತಾರೆ ಎಂದರು.

ನಂತರ ನಡೆಯುವ ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ವೈದ್ಯ ಸಾಹಿತಿ ಡಾ.ಕೆ.ಬಿ.ಸೂರ್ಯ ಕುಮಾರ್ ವಹಿಸಲಿದ್ದು ಸಾಹಿತಿ ಕಾಜೂರು ಸತೀಶ್ ಆಶಯ ನುಡಿಗಳನ್ನಾಡಲಿದ್ದಾರೆ. ಸಾಹಿತಿ ಎನ್.ಕೆ ಮಾಲಾದೇವಿ ಮೂರ್ತಿ, ಕೊಡಗು ಜಿಲ್ಲಾ ಹೋಂ ಸ್ಟೇ ಅಸೋಸಿಯೇಷನ್ ಅಧ್ಯಕ್ಷೆ ಮೋಂತಿ ಗಣೇಶ್, ಹಿರಿಯ ಪತ್ರಕರ್ತ ಎಸ್.ಜಿ ಉಮೇಶ್ ವಿವಿಧ ವಿಷಯಗಳನ್ನು ಕುರಿತು ಉಪನ್ಯಾಸ ನೀಡಲಿದ್ದಾರೆ. ಸಂಜೆ 6 ಗಂಟೆಗೆ ಜಿಲ್ಲೆಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದರು. ಮೇ 30ರಂದು ಬೆಳಿಗ್ಗೆ 10 ಗಂಟೆಗೆ ನಡೆಯುವ ವಿಚಾರಗೋಷ್ಠಿಯ ಅಧ್ಯಕ್ಷತೆಯನ್ನು ನಿವೃತ್ತ ಪ್ರಾಧ್ಯಾಪಕ ಕೋಡಿರ ಲೋಕೇಶ್ ಮೊಣ್ಣಪ್ಪ ವಹಿಸಿಕೊಳ್ಳಲಿದ್ದು, ಪತ್ರಿಕೋದ್ಯಮಿ ಜಿ.ಚಿದ್ವಿಲಾಸ್ ಆಶಯ ನುಡಿಗಳನ್ನಾಡಲಿದ್ದಾರೆ. ಸಾಹಿತಿ ಡಾ.ಜೆ.ಸೋಮಣ್ಣ, ಕೃಷಿ ವಿಜ್ಞಾನಿ ಡಾ. ಮುರುಳಿಧರ್, ಆರ್.ಕೆ.ಬಾಲಚಂದ್ರ, ಚೆಪ್ಪುಡಿರ ಕಾರ್ಯಪ್ಪ ಮಾತನಾಡಲಿದ್ದಾರೆ. ಮಧ್ಯಾಹ್ನ ಸಾಹಿತಿ ಕೃಪಾ ದೇವರಾಜ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ ಸಹ ನಡೆಯಲಿದೆ. ನಂತರ ನಡೆಯುವ ಬಹಿರಂಗ ಆಧಿವೇಶನದಲ್ಲಿ ಕೊಡಗಿನ ಸಮಸ್ಯೆಗಳ ಕುರಿತು ನಿರ್ಣಯ ಮಂಡಿಸಿ ಸಂಬಂಧಪಟ್ಟ ಇಲಾಖೆ ಮತ್ತು ಸರ್ಕಾರಕ್ಕೆ ನಿರ್ಣಯ ಸಲ್ಲಿಸಲಾಗುವುದು ಎಂದರು.

ಸಾಧಕರನ್ನು ಸನ್ಮಾನಿಸುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಹಿತಿ ಕೆ.ಪಿ ಬಾಲಸುಬ್ರಹ್ಮಣ್ಯ ವಹಿಸಲಿದ್ದು, ಕಿರಿಕೊಡ್ಲಿ ಮಠದ ಪೀಠಾಧಿಪತಿ ಸದಾಶಿವ ಸ್ವಾಮೀಜಿ ಸಾಧಕರನ್ನು ಸನ್ಮಾನಿಸಲಿದ್ದಾರೆ ಎಂದರು.

ಈ ಬಾರಿ ವಿಶೇಷವಾಗಿ ವಿಶೇಷ ಚೇತನರಲ್ಲಿ ಸಾಧನೆಗೈದವರನ್ನು ಗುರುತಿಸುವ ಮತ್ತು ಬಾಲ ಪ್ರತಿಭೆಗಳನ್ನು ಗುರುತಿಸಿ ಸನ್ಮಾನಿಸುವ ವಿಶೇಷ ಕಾರ್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ ಎಂದರು. ನಂತರ ನಡೆಯುವ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಸ್ವಾಗತ ಸಮಿತಿ ಉಪಾಧ್ಯಕ್ಷ ಲೋಕೇಶ್ಕುಮಾರ್ ಮಾತನಾಡಿ, ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಅಗತ್ಯ ಸಿದ್ಧತಾ ಕಾರ್ಯಗಳು ನಡೆದಿವೆ ಎಂದರು. ಮುಖಂಡರಾದ ಸಬಾಸ್ಟಿನ್, ಬಿ.ಸಿ.ದಿನೇಶ್, ನಾಗೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-51-177321637

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.