ಸೋಮವಾರಪೇಟೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ವತಿಯಿಂದ 6ನೇ ಕೊಡವ ಪುಸ್ತಕ ಸಂಗ್ರಹ ಮತ್ತು ಪುಸ್ತಕ ಬಿಡುಗಡೆ ಕಾರ್ಯಕ್ರಮ ಏ.14ರಂದು ಇಲ್ಲಿನ ಕೊಡವ ಸಮಾಜದ ಸಭಾಂಗಣದಲ್ಲಿ ಬೆಳಿಗ್ಗೆ 11ಕ್ಕೆ ನಡೆಯಲಿದೆ.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕೊಡವ ಸಮಾಜದ ಅಧ್ಯಕ್ಷ ಎಂ.ಬಿ. ಅಭಿಮನ್ಯುಕುಮಾರ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಮಾಜದ ಹಿರಿಯರಾದ ಕಲ್ಲೇಂಗಡ ಎಂ. ಅಪ್ಪಯ್ಯ, ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ, ಕುಶಾಲನಗರದ ಐಶ್ವರ್ಯ ವಿದ್ಯಾಸಂಸ್ಥೆ ಸ್ಥಾಪಕ ಅಧ್ಯಕ್ಷ ಪುಲಿಯಂಡ ರಾಮು ದೇವಯ್ಯ ಉಪಸ್ಥಿತರಿರುವರು.

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯ ತೇಲಪಂಡ ಕವನ್ ಕಾರ್ಯಪ್ಪ ಅವರು ಕೊಡವ ಭಾಷೆಯಲ್ಲಿ ಪುಸ್ತಕದ ಅವಶ್ಯಕತೆ ಮತ್ತು ಪ್ರಯೋಜನದ ಕುರಿತು ವಿಷಯ ಮಂಡಿಸಲಿದ್ದು, ಕರೋಟಿರ ಶಶಿ ಸುಬ್ರಮಣಿ ರಚಿತ ನಂಬಿಕೆ ಪುರಾಣತ್ ರ ನಡುಲ್ ಕೊಡವಡ ಸಾಂಸ್ಕೃತಿಕ ಬದ್ ಕ್ ಪುಸ್ತಕ ಬಿಡುಗಡೆ ನಡೆಯಲಿದೆ ಎಂದು ರಿಜಿಸ್ಟ್ರಾರ್ ಚಿನ್ನಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-51-863686228

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.