ಉಳ್ಳಾಲ: ಮಂಗಳೂರು ವಿಶ್ವವಿದ್ಯಾನಿಲಯದ ನಿವೃತ್ತ ಕನ್ನಡ ಪ್ರಾಧ್ಯಾಪಕ ಬಿ.ಎ.ವಿವೇಕ ರೈ ಅವರಿಗೆ ಎಂಬತ್ತು ವರ್ಷ ತುಂಬಿದ ಸಂಭ್ರಮದ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯ ಡಾ.ಪಿ.ದಯಾನಂದ ಪೈ ಮತ್ತು ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ ವತಿಯಿಂದ ಕಲಾಭಿನಂದನೆ ಮತ್ತು ತಾಳಮದ್ದಲೆ ಕಾರ್ಯಕ್ರಮ ಮೇ 21ರಂದು ಮಧ್ಯಾಹ್ನ 2.30ರಿಂದ ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಯು.ಆರ್.ರಾವ್ ಸಭಾಂಗಣದಲ್ಲಿ ನಡೆಯಲಿದೆ.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಅಧ್ಯಕ್ಷತೆ ವಹಿಸಲಿದ್ದು, ಯಕ್ಷಗಾನ ಅರ್ಥಧಾರಿ ರಾಧಾಕೃಷ್ಣ ಕಲ್ಚಾರ್ ಅಭಿವಂದನಾ ನುಡಿಗಳನ್ನಾಡಲಿದ್ದಾರೆ.

ಬಳಿಕ ನಡೆಯುವ ಭೀಷ್ಮಾರ್ಜುನ ಕಾಳಗ ತಾಳಮದ್ದಳೆಯಲ್ಲಿ ಭಾಗವತರಾಗಿ ಸುಬ್ರಾಯ ಸಂಪಾಜೆ, ಚೆಂಡೆ–ಮದ್ದಲೆಯಲ್ಲಿ ಪದ್ಯಾಣ ಶಂಕರನಾರಾಯಣ ಭಟ್, ಮುರಳೀಧರ ಕಲ್ಲೂರಾಯ, ಅರ್ಥಧಾರಿಗಳಾಗಿ ಗಣರಾಜ ಕುಂಬಳೆ, ರಾಧಾಕೃಷ್ಣ ಕಲ್ಚಾರ್, ನಾಗವೇಣಿ ಮಂಚಿ ಭಾಗವಹಿಸಲಿದ್ದಾರೆ ಎಂದು ಯಕ್ಷಗಾನ ಅಧ್ಯಯನ ಕೇಂದ್ರದ ನಿರ್ದೇಶಕ ಧನಂಜಯ ಕುಂಬ್ಳೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-29-86974783

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.