ಮುಂಡರಗಿ: ‘ಗ್ರಾಮೀಣ ಭಾಗದ ದೈನಂದಿನ ಜನಜೀವನವೇ ಜಾನಪದ ಸಾಹಿತ್ಯಕ್ಕೆ ಮೂಲಾಧಾರವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆಲವರು ಜಾನಪದ ಗೀತೆಗಳ ಹೆಸರಿನಲ್ಲಿ ನೈಜ ಸೊಗಡನ್ನು ಹಾಳು ಮಾಡುತ್ತಿರುವುದು ದುರ್ದೈವದ ಸಂಗತಿ’ ಎಂದು ಅನ್ನದಾನೀಶ್ವರ ಸ್ವಾಮೀಜಿ ವಿಷಾದಿಸಿದರು.

ಇಲ್ಲಿನ ಕ.ರಾ. ಬೆಲ್ಲದ ಪದವಿ ಹಾಗೂ ಅರ್ಥಶಾಸ್ತ್ರ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಮುಕ್ತಾಯ ಹಾಗೂ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಈ ಹಿಂದೆ ಗ್ರಾಮೀಣ ಭಾಗದ ರೈತರು ಹಾಗೂ ಮಹಿಳೆಯರು ತಮ್ಮ ದೈಹಿಕ ಹಾಗೂ ಮಾನಸಿಕ ಒತ್ತಡಗಳ ನಿವಾರಣೆಗೆ ವಿವಿಧ ಜಾನಪದ ಕಲೆಗಳ ಮೊರೆ ಹೋಗುತ್ತಿದ್ದರು. ಜಾನಪದದಲ್ಲಿ ಮನರಂಜನೆ ಜೊತೆಗೆ ಜೀವನ ಮೌಲ್ಯಗಳು ಅಡಕವಾಗಿದ್ದು, ಅವುಗಳನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಕಾಲೇಜು ಮೇಲ್ವಿಚಾರಣಾ ಸಮಿತಿ ಉಪಾಧ್ಯಕ್ಷ ವಿ.ಎಫ್. ಗುಡದಪ್ಪನವರ ಸಮಾರಂಭ ಉದ್ಘಾಟಿಸಿದರು.ಪ್ರಾಚಾರ್ಯ ಸಂತೋಷ ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜಿ. ಗಚ್ಚಣ್ಣವರ, ವನಜಾಕ್ಷಿ ಭರಮಗೌಡರ, ಸಚಿನ ಉಪ್ಪಾರ, ಮನೋಜ್ ಕೋರ್ಪಡೆ, ಸಂಗೀತಾ ಮಳಲಿ, ಲತಾ ಕಡ್ಡಿ ಇದ್ದರು.

ಉಪನ್ಯಾಸಕ ಆರ್.ಎಚ್. ಜಂಗಣವಾರಿ ಸ್ವಾಗತಿಸಿದರು. ಕುಮಾರ ಜೆ. ನಿರೂಪಿಸಿದರು. ವಿದ್ಯಾರ್ಥಿ ಪ್ರತಿನಿಧಿ ಈರಮ್ಮ ಬಂಡಿವಡ್ಡರ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-23-717161726

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.