ನಂಜನಗೂಡು: ‘ಕನ್ನಡ ಭಾಷೆ ಶ್ರೀಮಂತಗೊಳಿಸುವ ಉದ್ದೇಶದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1915ರಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿದರು. ಕಸಾಪ ಕೇವಲ ಸಾಹಿತ್ಯದ ವೇದಿಕೆಯಲ್ಲ, ನಮ್ಮ ಕನ್ನಡ ಭಾಷೆಯ ಅಸ್ಮಿತೆ’ ಎಂದು ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹೇಳಿದರು.

ನಗರದ ಭಾರತಿ ತೀರ್ಥ ಸಭಾಂಗಣದಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ 112ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಪ್ರಾಂತೀಯ ಭಾಷೆಗಳಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ತಂದುಕೊಡಬೇಕು ಎಂಬ ಉದ್ದೇಶದಿಂದ ಕನ್ನಡ ಸಾಹಿತ್ಯ ಪರಿಷತ್ ಸ್ಥಾಪಿಸಿ, ಆ ಮೂಲಕ ನಾಡಿನ ಸಾಹಿತ್ಯ ಮತ್ತು ಸಂಸ್ಕೃತಿ ಉಳಿಸಿ ಬೆಳೆಸಲು ಶ್ರಮಿಸಲಾಗಿದೆ. ನಾಲ್ವಡಿ ಅವರ ಪರಿಶ್ರಮದಿಂದಾಗಿ ಇಂದು ಕನ್ನಡ ಭಾಷೆ ಶಾಸ್ತ್ರೀಯ ಸ್ಥಾನಮಾನ ಲಭಿಸಿದೆ’ ಎಂದು ತಿಳಿಸಿದರು.

‘ಕನ್ನಡಿಗರ ಒಗ್ಗಟ್ಟಿಗೆ ಸಾಕ್ಷಿಯಾದ ಈ ಸಂಸ್ಥೆ, ನೂರು ವರ್ಷ ದಾಟಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ನಾಡು- ನುಡಿಯ ಸಂರಕ್ಷಣೆಗಾಗಿ ಶ್ರಮಿಸುತ್ತಿರುವ ಪರಿಷತ್ತಿಗೆ ನಾವೆಲ್ಲರೂ ಬೆಂಬಲ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಕನ್ನಡ ಭಾಷೆಯನ್ನು ಹೆಚ್ಚು ಅಧ್ಯಯನ ಮಾಡಬೇಕು’ ಎಂದು ಹೇಳಿದರು.

ಪ್ರಾಂಶುಪಾಲ ದಿನೇಶ್, ‘ವಿದ್ಯಾರ್ಥಿ ಗಳು ಇಂಗ್ಲಿಷ್ ವ್ಯಾಮೋಹ ಹಾಗೂ ಕೀಳರಿಮೆ ಬಿಟ್ಟು, ಶ್ರದ್ಧೆ ಪರಿಶ್ರಮದಿಂದ ಕನ್ನಡ ಭಾಷೆ ಬರೆದು ಓದುವ ಮನಸ್ಥಿತಿ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಲತಾ ಮುದ್ದು ಮೋಹನ್, ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್, ಬಿ.ವಿ.ರಾಘವೇಂದ್ರ, ಡಾ.ಅನಿತಾ, ಸತೀಶ್ ದಳವಾಯಿ, ರಂಗಸ್ವಾಮಿ, ಶೋಭಾ ನಾಗಶಯನ, ಮಂಜುಳಾ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260506-38-2019743738

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.