ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ಯಾರಾಲಿಂಪಿಕ್ಸ್‌: ಶೂಟಿಂಗ್‌ನಲ್ಲಿ ಅವನಿ ಲೇಖರಾಗೆ ಚಿನ್ನ

Published : 30 ಆಗಸ್ಟ್ 2024, 12:56 IST
Last Updated : 30 ಆಗಸ್ಟ್ 2024, 12:56 IST
ಫಾಲೋ ಮಾಡಿ
Comments

ಪ್ಯಾರಿಸ್: ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತದ ಅವನಿ ಲೇಖರಾ 10 ಮೀ. ಏರ್‌ ರೈಫಲ್‌ನಲ್ಲಿ ಚಿನ್ನದ ಪದಕ ಪಡೆದಿದ್ದಾರೆ.

ಸತತ ಎರಡು ಪ್ಯಾರಾಲಿಂಪಿಕ್ಸ್‌ನಲ್ಲಿ ಚಿನ್ನ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಶುಕ್ರವಾರ ನಡೆದ ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ಸ್ಪರ್ಧೆಯಲ್ಲಿ ಅವನಿ ಚಿನ್ನದ ಪದಕ ಪಡೆದರು. ಇದೇ ಸ್ಪರ್ಧೆಯಲ್ಲಿ ಭಾರತದ ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದರು.

ಈ ಸ್ಪರ್ಧೆಯಲ್ಲಿ ಅವನಿ 249.7 ಅಂಕಗಳಿಸಿ ಮೊದಲ ಸ್ಥಾನ ಪಡೆದರು. ಮೋನಾ ಅಗರ್ವಾಲ್ 228.7 ಅಂಕಗಳಿಸಿ ಮೂರನೇ ಸ್ಥಾನ ಪಡೆದರು.

ಪ್ರಸ್ತುತ ನಡೆಯುತ್ತಿರುವ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತ ಒಂದು ಚಿನ್ನ, ಎರಡು ಕಂಚಿನ ಪದಕ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT