ಉಳ್ಳಾಲ:ನಿರ್ಮಲ ಭಾರತ್ ಚಾರಿಟಬಲ್ ಟ್ರಸ್ಟ್ ಸಹಯೋಗದಲ್ಲಿ ರಾಣಿ ಅಬ್ಬಕ್ಕಳ 500ನೇ ಜನ್ಮ ವರ್ಷಾಚರಣೆಯ ಅಂಗವಾಗಿ ಅಬ್ಬಕ್ಕ @500 ಪ್ರೇರಣಾದಾಯಿ 100 ಉಪನ್ಯಾಸ ಸರಣಿ ಸಮಾರೋಪ ಏ.18ರಂದು ಉಳ್ಳಾಲದ ಶಾರದಾ ನಿಕೇತನ ಸಭಾಂಗಣದಲ್ಲಿ ಆಯೋಜಿಸ ಲಾಗಿದೆ ಎಂದು ಟ್ರಸ್ಟ್ ಮುಖ್ಯಸ್ಥ ಜಿತೇಂದ್ರ ಶೆಟ್ಟಿ ತಲಪಾಡಿ ಗುತ್ತು ತಿಳಿಸಿದ್ದಾರೆ.

ಎಬಿಆರ್ಎಸ್ಎಂ, ಅಂಗಸಂಸ್ಥೆ ಕೆಆರ್ಎಂಎಸ್ಎಸ್ ತುಳುನಾಡಿನ ವೀರ ವನಿತೆ ರಾಣಿ ಅಬ್ಬಕ್ಕಳ ಇತಿಹಾಸವನ್ನು ಯುವಜನರಿಗೆ ಪರಿಚಯಿಸುವ ಉದ್ದೇಶದಿಂದ ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳ ವಿವಿಧ ವಿದ್ಯಾಸಂಸ್ಥೆಗಳಲ್ಲಿ 100 ಉಪನ್ಯಾಸ ನೀಡಿದೆ. ಈ ಸರಣಿಯ ಸಮಾರೋಪ ಹಾಗೂ ಅಬ್ಬಕ್ಕ @500 ಸಂಭ್ರಮಾಚರಣೆಯ ಅಂಗವಾಗಿ ಅಬ್ಬಕ್ಕ ನೆನಪಿನೈಸಿರಿ ಸಂಚಿಕೆ ಲೋಕಾರ್ಪಣೆ ನಡೆಯಲಿದ್ದು, ಕಾರ್ಯಕ್ರಮ ವನ್ನು ಧರ್ಮಸ್ಥಳದ ಅಬ್ಬಕ್ಕ ವಂಶಸ್ಥೆ ಅನಿತಾ ಸುರೇಂದ್ರಕುಮಾರ್ ಉದ್ಘಾಟಿಸುವರು. ಆರ್ಎಸ್ಎಸ್ ಅಖಿಲ ಭಾರತೀಯ ಸಹ ಬೌದ್ಧಿಕ ಪ್ರಮುಖ್ ಸುಧೀರ್ ಸಮಾರೋಪ ಭಾಷಣ ಮಾಡಲಿದ್ದಾರೆ. ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಅಜಯ ಸಿ.ಕೋಟ್ಯಾನ್ ಅಧ್ಯಕ್ಷತೆ ವಹಿಸುವರು. ಪ್ರವೀಣ್ ಕುಮಾರ್, ಡಾ.ಗುರುನಾಥ ಬಡಿಗೇರ್, ಸಂದೀಪ್ ಬೂದಿಹಾಳ್, ಕೆ.ರಮೇಶ್ ಭಾಗಿಯಾಗಲಿದ್ದಾರೆ. ಇದೇ ವೇಳೆ ಡಾ. ತುಕಾರಾಮ ಪೂಜಾರಿ ಮತ್ತು ಡಾ. ಆಶಾಲತಾ ಎಸ್.ಸುವರ್ಣ ಅವರಿಗೆ ಗೌರವ ಸಮರ್ಪಣೆ, ಗುರು ರಾಜಶ್ರೀ ಉಳ್ಳಾಲ್ ನಾಟ್ಯನಿಕೇತನದ ಶಿಷ್ಯರಿಂದ ನೃತ್ಯ ಮೋಹನ ಹಾಗೂ ವೀರರಾಣಿ ಅಬ್ಬಕ್ಕ ಕಿರು ನೃತ್ಯ ರೂಪಕ ಪ್ರದರ್ಶನ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಕರ್ನಾಟಕ ರಾಜ್ಯ ಮಹಾವಿದ್ಯಾಲಯ ಶಿಕ್ಷಕ ಸಂಘದ ಸದಸ್ಯರಾದ ಡಾ.ಶರಣ್ ಕುಮಾರ್ ಶೆಟ್ಟಿ ಮಂಗಳಾದೇವಿ, ಉಚ್ಚಿಲ ಭಗವತಿ ಎಜುಕೇಶನ್ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂದ್ರಹಾಸ್ ಉಳ್ಳಾಲ್, ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯದರ್ಶಿ ಗುರುಪ್ರಸಾದ್ ಉಳ್ಳಾಲ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-29-1782307237

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.