ಶಿರಸಿ: ಇಲ್ಲಿನ ತೋಟಗಾರಿಕೆ ಮಹಾವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಗ್ರಾಮೀಣ ಕಾರ್ಯಾನುಭವ ಕಾರ್ಯಕ್ರಮದ ಅಡಿಯಲ್ಲಿ ಇತ್ತೀಚೆಗೆ ತಾಲ್ಲೂಕಿನ ತಿಗಣಿ ಗ್ರಾಮದಲ್ಲಿ ರೈತರಿಗಾಗಿ ವಿಶೇಷ ತರಬೇತಿ ಮತ್ತು ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ಹಾವೇರಿ ಜಿಲ್ಲೆ ದೇವಿಹೊಸೂರಿನ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥ ರತ್ನಾಕರ ಶೇಟ್ ಅವರು ರೈತರಿಗೆ ವೈಜ್ಞಾನಿಕ ಕೃಷಿ ಪದ್ಧತಿಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಉತ್ತಮ ಗುಣಮಟ್ಟದ ಬೀಜ ನಿರ್ವಹಣೆ, ಬೀಜಗಳನ್ನು ವೈಜ್ಞಾನಿಕವಾಗಿ ಸಂಗ್ರಹಿಸುವ ವಿಧಾನ, ವಿವಿಧ ಸಸ್ಯ ಜಾತಿಗಳ ಸಂರಕ್ಷಣೆ ಮತ್ತು ರೈತ ಹಕ್ಕುಗಳ ಕಾಯ್ದೆಯ ಬಗ್ಗೆ ಅವರು ರೈತರಿಗೆ ಮನವರಿಕೆ ಮಾಡಿಕೊಟ್ಟರು. ಅಲ್ಲದೆ, ತೋಟಗಾರಿಕೆ ವಿಶ್ವವಿದ್ಯಾಲಯದಿಂದ ಬಿಡುಗಡೆಯಾದ ವಿವಿಧ ಸ್ಥಳೀಯ ಮತ್ತು ಹೈಬ್ರಿಡ್ ತಳಿಗಳ ವಿಶೇಷತೆಗಳನ್ನು ವಿವರಿಸಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಬಾಳೆಯ ಅಂಗಾಂಶ ಕೃಷಿ, ಭತ್ತ ಹಾಗೂ ಶುಂಠಿ ಬೆಳೆಗಳ ಬೀಜೋಪಚಾರ ಮತ್ತು ಬೀಜಗಳ ಮೊಳಕೆ ಸಾಮರ್ಥ್ಯವನ್ನು ಪರೀಕ್ಷಿಸುವ ಪ್ರಾತ್ಯಕ್ಷಿಕೆಗಳನ್ನು ತೋರಿಸುವ ಮೂಲಕ ರೈತರಿಗೆ ತಾಂತ್ರಿಕ ಅರಿವು ಮೂಡಿಸಿದರು.

ಗ್ರಾಮದ ಪ್ರಮುಖ ಸದಾನಂದ ಚನ್ನಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ತಂಡದ ನೇತೃತ್ವವನ್ನು ಶ್ರೇಯಾ ನಾಯ್ಕ ಮತ್ತು ಸೋಹೆಲ್ ನದಾಫ ವಹಿಸಿದ್ದರು. ಗ್ರಾಮದ ಹೆಚ್ಚಿನ ಸಂಖ್ಯೆಯ ರೈತರು ಉತ್ಸಾಹದಿಂದ ಪಾಲ್ಗೊಂಡು ತರಬೇತಿಯ ಪ್ರಯೋಜನ ಪಡೆದುಕೊಂಡರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-20-828162427

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.