ಬ್ರಹ್ಮಾವರ: ಆಧುನಿಕ ಸಂಗೀತದ ಪ್ರಭಾವ ಹೆಚ್ಚುತ್ತಿರುವ ಕಾರಣ ಜನಪದ ಹಾಡುಗಳು ಮತ್ತು ಜಾನಪದ ಕಲೆಗಳು ನಿಧಾನವಾಗಿ ಮರೆಯಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಯತ್ನಗಳು ನಡೆಯಬೇಕು ಎಂದು ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಅಭಿಪ್ರಾಯಪಟ್ಟರು.

ಶ್ರೀ ಬ್ರಾಹ್ಮೀ ಗ್ರೂಪ್ಸ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯಾದಗಿರಿ ಗುರುಮಿಠಕಲ್ನ ವಿಶ್ವ ಮಾನವ ಫೌಂಡೇಷನ್ ಹಾಗೂ ತಸ್ಮಯ್ ಪ್ರೊಡಕ್ಷನ್ಸ್ ಸಂಯುಕ್ತ ಆಶ್ರಯದಲ್ಲಿ ಕೋಡಿ ಕನ್ಯಾನದಲ್ಲಿ ಈಚೆಗೆ ನಡೆದ ಜನಪದ ಸಿರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮುಖಂಡ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಅಗಲಿದ ಜಾನಪದ ಕಲಾವಿದ ಗಣೇಶ್ ಗಂಗೊಳ್ಳಿ ಅವರ ಸೇವೆಯನ್ನು ಸ್ಮರಿಸಿದರು.

ಕೋಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರ್ ಕುಂದರ್ ಮಾತನಾಡಿ, ಜನಪದ ಕಲೆಗಳಿಗೆ, ಯಕ್ಷಗಾನ ಕಲೆಗೂ ಸಮಾನ ಸ್ಥಾನಮಾನವಿದ್ದು, ಯುವಜನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ನಿರ್ಲಕ್ಷ್ಯದಿಂದ ಈ ಕಲೆಗಳಿಗೆ ಹಿನ್ನಡೆಯಾಗುತ್ತಿದೆ. ಅವುಗಳ ಸಂರಕ್ಷಣೆಗಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಯರತ್ನ ಚಾರಿಟಬಲ್ ಟ್ರಸ್ಟ್ನ ದಿನೇಶ್ ಹೆಗ್ಡೆ ಮೊಳಹಳ್ಳಿ, ಕೃಷ್ಣ ಕಾಂಚನ್, ಶಂಕರ್ ಬಂಗೇರ, ಜಯಂತ ಅಮೀನ್, ರವೀಶ್ ಕುಂದರ್, ರವೀಂದ್ರ ಪೂಜಾರಿ, ಸತೀಶ್ ತಿಂಗಳಾಯ ಇದ್ದರು.

ಕೋಟ ಸುರೇಶ್ ಬಂಗೇರ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೊರಗ ಪೂಜಾರಿ, ಮೈತ್ರಿ ಯುವ ಮಂಡಲದ ಅಧ್ಯಕ್ಷ ರಮೇಶ್ ತಿಂಗಳಾಯ ಹಾಗೂ ರಾಘವೇಂದ್ರ ಕರ್ಕೇರ ಅವರನ್ನು ಸನ್ಮಾನಿಸಲಾಯಿತು.

ಮಂಜುನಾಥ ಹಿಲಿಯಾಣ ನಿರೂಪಿ ಸಿದರು. ವಿವಿಧ ಜನಪದ ತಂಡಗಳಿಂದ ಜನಪದ ನೃತ್ಯಗಳು ಪ್ರದರ್ಶನಗೊಂಡವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-28-668554859

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.