ಉಡುಪಿ: ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಪ್ರದಾನ ಸಮಾರಂಭ ಏ. 26ರಂದು ಸಂಜೆ 5ಕ್ಕೆ ಉದ್ಯಾವರದ ಚರ್ಚ್ ವಠಾರದಲ್ಲಿ ನಡೆಯಲಿದೆ ಎಂದು ಅಕಾಡೆಮಿ ಅಧ್ಯಕ್ಷ ಜೋಕಿಂ ಸ್ಟ್ಯಾನಿ ಆಲ್ವಾರಿಸ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಗೌರವ ಪ್ರಶಸ್ತಿಯನ್ನು ರೊನ್ ರೊಚ್ ಕಾಸ್ಸಿಯಾ, ರಾಮದಾಸ ದತ್ತಾತ್ರೇಯ ಗುಲ್ವಾಡಿ, ಸೈರು ಪುತ್ತು ನಾಯ್ಕ ಅವರಿಗೆ ಹಾಗೂ ಪುಸ್ತಕ ಪುರಸ್ಕಾರವನ್ನು ಆಂಡ್ರ್ಯೂ ಎಲ್. ಡಿಕುನ್ಹಾ, ರೋಶನ್ ಮೆಲ್ಕಿ ಸಿಕ್ವೇರಾ ಹಾಗೂ ರಿಚರ್ಡ್ ಆಲ್ವಾರಿಸ್ ಅವರಿಗೆ ಪ್ರದಾನ ಮಾಡಲಾಗುವುದು ಎಂದರು.

ಸಚಿವ ಶಿವರಾಜ್ ಎಸ್. ತಂಗಡಗಿ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉಡುಪಿ ಕಥೊಲಿಕ್ ಧರ್ಮ ಪ್ರಾಂತ್ಯದ ಪ್ರೇಷಿತ ಆಡಳಿತಾಧಿಕಾರಿ ಜೆರಾಲ್ಡ್ ಐಸಾಕ್ ಲೋಬೊ ಪಾಲ್ಗೊಳ್ಳುವರು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಖಾರ್ವಿ, ಸಿದ್ಧಿ, ಕುಡುಬಿ ಸಮುದಾಯದ ಸಾಂಸ್ಕೃತಿಕ ನೃತ್ಯ ಬ್ರಾಸ್ ಬ್ಯಾಂಡ್ ಹಾಗೂ ಕೊಂಕಣಿ ಸಂಗೀತ ರಸಮಂಜರಿ ನಡೆಯಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನವೀನ್ ಲೋಬೊ, ಪ್ರಕಾಶ್ ನೊರೊನ್ಹಾ, ಸ್ಟೀವನ್ ಕುಲಾಸೊ, ಮೆಲ್ವಿನ್ ನೊರೊನ್ಹಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-28-1214022617

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.