ಕುಂದಾಪುರ: ಭಾವಗೀತೆ, ಭಕ್ತಿಗೀತೆ, ಜಾನಪದ ಗೀತೆ, ರೈತಗೀತೆ, ದೇಶಭಕ್ತಿ ಗೀತೆ, ಸಿನಿಮಾ ಹಾಡುಗಳು ಸೇರಿದಂತೆ ಸಾವಿರಾರು ಹಾಡುಗಳಿಗೆ ದನಿಯಾಗಿದ್ದ ಗಾಯಕ, ಆಕಾಶವಾಣಿ, ದೂರದರ್ಶನ ಕಲಾವಿದ ಗಣೇಶ್ ಗಂಗೊಳ್ಳಿ (64) ಮಂಗಳವಾರ ನಿಧನರಾದರು.

ಮೂಲತಃ ಗಂಗೊಳ್ಳಿಯ ಬಾವಿಕಟ್ಟೆ ನಿವಾಸಿಯಾಗಿದ್ದ ಅವರು ಡಿ. ನಾರಾಯಣ, ಚಂದು ದಂಪತಿ ಪುತ್ರ. ಗೋಪಾಡಿ ಗ್ರಾಮದ ಪಡುಗೋಪಾಡಿಯ ಪತ್ನಿಯ ಮನೆಯಲ್ಲಿ ನೆಲೆಸಿದ್ದರು. ಸೋಮವಾರ ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ಮನೆಗೆ ಬಂದಿದ್ದ ಅವರ ಆರೋಗ್ಯದಲ್ಲಿ ಏರುಪೇರು ಕಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಅಸುನೀಗಿದ್ದಾರೆ. ಮೃತರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.

ಮಹಾಬಲೇಶ್ವರ್ ಹೊನ್ನಾವರ, ಮಧೂರು ಬಾಲಸುಬ್ರಹ್ಮಣ್ಯಂ, ವಾಸುದೇವ ಭಟ್ ಉಡುಪಿ ಅವರಲ್ಲಿ ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತ, ಸುಗಮ ಸಂಗೀತ ಅಭ್ಯಾಸ ನಡೆಸಿದ್ದರು. ಅನೇಕ ವಿದ್ಯಾರ್ಥಿಗಳಿಗೆ ಜಾನಪದ ಸಂಗೀತ ಶಿಕ್ಷಣ ನೀಡಿದ್ದರು. ನಾಡಿನಾದ್ಯಂತ ಅಭಿಮಾನಿಗಳನ್ನು ಹೊಂದಿದ್ದ ಗಣೇಶ್ ಅವರು ವೃತ್ತಿಪರ, ಹವ್ಯಾಸಿ ಸಂಗೀತ ತಂಡಗಳಲ್ಲಿ ಹಾಡುಗಾರರಾಗಿದ್ದರು. ಬೆಳಕಿಗೆ ಬಾರದ ಅನೇಕ ಪ್ರತಿಭೆಗಳಿಗೆ ವೇದಿಕೆ ನೀಡುವ ಕಾರ್ಯ ಮಾಡಿದ್ದರು.

ಜಾನಪದ ಅಕಾಡಮಿ ಪ್ರಶಸ್ತಿ, ಬೇಂದ್ರೆ ನುಡಿಸಿರಿ ರಾಷ್ಟ್ರೀಯ ಪ್ರಶಸ್ತಿ, ಡಾ.ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿ, ಸಂಸ್ಕಾರ ಭಾರತಿ ರಾಜ್ಯ ಪ್ರಶಸ್ತಿ, ಕರ್ನಾಟಕ ಯುವರತ್ನ ಪ್ರಶಸ್ತಿ, ಸ್ವಾಮಿ ವಿವೇಕಾನಂದ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿಗಳು ಅವರಿಗೆ ಸಂದಿವೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260408-28-623249557

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.