ಉಡುಪಿ: ನಿಸ್ವಾರ್ಥ ಸೇವೆ, ಮಾನವೀಯ ಕಳಕಳಿ ಇಟ್ಟುಕೊಂಡು, ಜನರಿಗೆ ಸಹಾಯ ಮಾಡುತ್ತಾ ಸಾಮಾಜಿಕವಾಗಿ ಮತ್ತು ಸಾಂಸ್ಕೃತಿಕವಾಗಿ ಬೆಳೆದು ನಿಂತಿರುವ ಸಂಸ್ಥೆ ಸುಮನಸಾ ಕೊಡವೂರು ಎಂದು ಪಡುಬಿದ್ರಿಯ ಯಸ್ಸೆನ್ ಸ್ಪೆಶಲ್ ಎಕಾನೋಮಿಕ್ ಜೋನ್ ಮುಖ್ಯಸ್ಥ ಅಶೋಕ್ ಶೆಟ್ಟಿ ಹೇಳಿದರು.

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆ ಮತ್ತು ಸುಮನಸಾ ಕೊಡವೂರು ರಜತ ಸಂಭ್ರಮ ಸಮಿತಿಯು ನಗರದ ಐವೈಸಿ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಂಸ್ಥೆಯು 31 ತುಳು ನಾಟಕ, 32 ಕನ್ನಡ ನಾಟಕ ಪ್ರದರ್ಶಿಸಿದ್ದಲ್ಲದೆ, ಯಕ್ಷಗಾನವನ್ನೂ ಪ್ರದರ್ಶಿಸುತ್ತ, ಪ್ರೋತ್ಸಾಹಿಸುತ್ತ ಬಂದಿದೆ ಎಂದರು.

ರಜತ ಮಹೋತ್ಸವದ ಕೈಪಿಡಿ ಬಿಡುಗಡೆ ಮಾಡಿದ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಮಾತನಾಡಿ, ಉಡುಪಿಯ ಅಜ್ಜರಕಾಡು ಭುಜಂಗ ಉದ್ಯಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ರಂಗಹಬ್ಬ ನಡೆಸುತ್ತಿರುವ ಏಕೈಕ ಸಂಸ್ಥೆ ಸುಮನಸಾ ಕೊಡವೂರು’ ಎಂದರು.

ತುಳು ಸಾಹಿತ್ಯ ಅಕಾಡೆಮಿ ಸದಸ್ಯ ಉದ್ಯಾವರ ನಾಗೇಶ್ ಕುಮಾರ್ ಮಾತನಾಡಿ, ‘ನಾವೆಲ್ಲ ಜನಪರವಾಗಿ, ಜಾತ್ಯತೀತ, ಸಂವಿಧಾನಬದ್ಧವಾಗಿ ಯೋಚನೆ ಮಾಡುತ್ತೇವೆ ಎಂದರೆ ಅದಕ್ಕೆ ಆಧುನಿಕ ರಂಗಭೂಮಿ ಕಾರಣವಾಗಿದೆ’ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಜತ ಸಂಭ್ರಮ ಸಮಿತಿ ಅಧ್ಯಕ್ಷ ಹರಿಪ್ರಸಾದ್ ರೈ ಮಾತನಾಡಿದರು.

ಬುಡ್ನಾರು ಯಕ್ಷ ಸಂಜೀವ ಟ್ರಸ್ಟ್ನ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣ ಲೋಗೊ ಬಿಡುಗಡೆ ಮಾಡಿದರು. ಸಂಘಟನೆಯ ಅಧ್ಯಕ್ಷ ಪ್ರಕಾಶ್ ಜಿ. ಕೊಡವೂರು ಸ್ವಾಗತಿಸಿದರು. ಗೌರವಾಧ್ಯಕ್ಷ ಎಂ.ಎಸ್. ಭಟ್ ವಂದಿಸಿದರು. ದಯಾನಂದ ಕರ್ಕೇರ ನಿರೂಪಿಸಿದರು.

ರಜತ ಸಂಭ್ರಮ ಸಮಿತಿ ಗೌರವಾಧ್ಯಕ್ಷ ಎಂ.ಎಲ್. ಸಾಮಗ, ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ಸಂಚಾಲಕ ಭಾಸ್ಕರ ಪಾಲನ್ ಬಾಚನಬೈಲು ಉಪಸ್ಥಿತರಿದ್ದರು.

ಬಳಿಕ ಅಟ್ಟಮಟ್ಟಾ ಬೇಸಿಗೆ ಶಿಬಿರ ವಿದ್ಯಾರ್ಥಿಗಳಿಂದ ಎರಡು ನಾಟಕಗಳು ಪ್ರದರ್ಶನಗೊಂಡವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-28-187935015

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.