ವಿಜಯಪುರ: ವಿಶೇಷ ನಟನೆ ಮೂಲಕ ಕನ್ನಡಿಗರ ಮನೆ-ಮಾತಾದ ನಟ ಸಾರ್ವಭೌಮ ಡಾ.ರಾಜಕುಮಾರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ವಿಶಿಷ್ಟವಾಗಿ ಆಚರಿಸಲು ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಕಾರ್ಯಕ್ರಮಕ್ಕೆ ಸಿದ್ಧತೆ ಕೈಗೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಾ.ರಾಜ್ಕುಮಾರ್ ಜನ್ಮ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

ಅಂದು ಬೆಳಿಗ್ಗೆ 9ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ರಾಜ್ ಜನ್ಮದಿನ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಡಾ.ರಾಜ್ ಕುಮಾರ ಕನ್ನಡ ನಾಡು ಕಂಡ ನೆಚ್ಚಿನ ನಟರಾಗಿದ್ದಾರೆ. ಕನ್ನಡಪರ ಹೋರಾಟಗಳಲ್ಲಿ ಭಾಗಿಯಾಗಿ ನಾಡು-ನುಡಿಗಾಗಿ ಮಹತ್ತರ ಸೇವೆ ಸಲ್ಲಿಸಿದ್ದಾರೆ. ವಿವಿಧ ಪಾತ್ರಗಳಲ್ಲಿ ಮನಮಿಡಿಯುವಂತೆ ನಟಿಸಿ ಕಲಾರಾಧಕರ ಹೃದಯ ಗೆದ್ದಿದ್ದಾರೆ. ಅವರ ಜನ್ಮ ದಿನವನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದರು.

ಡಾ.ರಾಜಕುಮಾರ್ ಅವರ ಚಲನಚಿತ್ರ ಗೀತೆಗಳನ್ನು ಹಾಡಲು ಆಸಕ್ತ ಕಲಾವಿದರು ಮತ್ತು ಎಲ್ಲ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಡಾ.ರಾಜ್ಕು ಮಾರ್ ಅಭಿನಯದ ಚಲ ನಚಿತ್ರಗಳ ಗೀತಗಾಯನ ಕಾರ್ಯಕ್ರಮದ ಮೆರಗನ್ನು ಹೆಚ್ಚಿಸಲು ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ವೀರಯ್ಯ ಸಾಲಿಮಠ, ಮಹಾನಗರ ಪಾಲಿಕೆಯ ಉಪ ಆಯುಕ್ತ ಮಹಾವೀರ ಬೋರಣ್ಣವರ, ಸಹಾಯಕ ತೋಟಗಾರಿಕಾ ನಿರ್ದೇಶಕ ಭಗವಂತ ಜಿಗಜಿಣಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರಾಜಶೇಖರ ಧೈವಾಡಿ ಎಂ.ಸಿ ಮುಲ್ಲಾ, ಅಡಿವೆಪ್ಪ ಸಾಲಗಲ್, ಸುರೇಶ ಬಿಜಾಪುರ, ಫಯಾಜ್ ಕಲಾದಗಿ, ಶರಣು ಸಬರದ, ಮಂಜುಳಾ ಅಂಗಡಿ, ಸುರೇಶ್ ಬಬಲೇಶ್ವರ, ಸೋಮನಗೌಡ ಕಲ್ಲೂರ, ಭೀಮರಾಯ ಜಿಗಜಿಣಗಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-26-1010337970

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.