ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕನ್‌ ಖಾದ್ಯ ವೈವಿಧ್ಯ

Last Updated 1 ಜುಲೈ 2022, 19:30 IST
ಅಕ್ಷರ ಗಾತ್ರ

ಸುಲಭ, ಸರಳ ವಿಧಾನ ಹಾಗೂ ಕಡಿಮೆ ಸಮಯದಲ್ಲಿ ತಯಾರಿಸಬಹುದಾದ ವಿಶಿಷ್ಟ ಚಿಕನ್ ಖಾದ್ಯಗಳ ರೆಸಿಪಿಗಳು ಇಲ್ಲಿವೆ.

ಚಿಕನ್ ಗ್ರೇವಿ

ಬೇಕಾಗುವ ಸಾಮಗ್ರಿಗಳು: ಚಿಕನ್- 1 ಕೆ.ಜಿ, ಗುಂಟೂರು ಮೆಣಸಿನಕಾಯಿ-20, ಈರುಳ್ಳಿ- 2, ರುಚಿಗೆ ತಕ್ಕಷ್ಟು ಉಪ್ಪು, ಅಡುಗೆ ಎಣ್ಣೆ- ಅರ್ಧ ಕಪ್, ಕೊತ್ತಂಬರಿ ಸೊಪ್ಪು- ಸ್ವಲ್ಪ, ಸಾಸಿವೆ- ಅರ್ಧ ಚಮಚ, ಅರಿಸಿಣ- ಅರ್ಧ ಚಮಚ, ಶುಂಠಿ–ಬೆಳ್ಳುಳ್ಳಿ ಪೇಸ್ಟ್, ಚಕ್ಕೆ– ಲವಂಗ, ಸ್ವಲ್ಪ ಕೊತ್ತಂಬರಿ ಸೊಪ್ಪು, ಸ್ವಲ್ಪ ಕರಿಬೇವಿನ ಸೊಪ್ಪು.

ತಯಾರಿಸುವ ವಿಧಾನ: ಪಾತ್ರೆಗೆ ಸ್ವಲ್ಪ ಅಡುಗೆ ಎಣ್ಣೆ ಹಾಕಿ, ಈರುಳ್ಳಿ, ಕರಿಬೇವು, ಸಾಸಿವೆ, ಅರಿಸಿಣ, ಉಪ್ಪು ಹಾಕಿ ಹಾಕಿ ಫ್ರೈ ಮಾಡಿ ಚಿಕನ್ ಹಾಕಿ ಬೇಯಲು ಬಿಡಬೇಕು. ಗುಂಟೂರು ಮೆಣಸಿನಕಾಯಿ, ಕೊತ್ತಂಬರಿಯನ್ನು ರುಬ್ಬಿಕೊಳ್ಳಬೇಕು. ನಂತರ ಮತ್ತೊಂದು ಬಾಣಲೆಗೆ ಅಡುಗೆ ಎಣ್ಣೆ, ಕರಿಬೇವು, ಸಾಸಿವೆ, ಕೊತ್ತಂಬರಿ, ಚಕ್ಕೆ, ಲವಂಗ, ಈರುಳ್ಳಿ, ಬೆಳ್ಳುಳ್ಳಿ, ಶುಂಠಿ ಎಲ್ಲವನ್ನು ಹಾಕಿ ಚೆನ್ನಾಗಿ ಬೆರೆಸಿಕೊಡಿ. ನಂತರ ಈಗಾಗಲೇ ಬೇಯಿಸಿದ ಚಿಕನ್ ಹಾಗೂ ರುಬ್ಬಿದ ಮಿಶ್ರಣವನ್ನು ಹಾಕಿ, ಕುದಿಯಲು ಬಿಡಿ. ನಂತರ ತೆಂಗಿನಕಾಯಿ ತುರಿ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.

ಚಪ್ಪಾತಿ, ದೋಸೆ, ಮುದ್ದೆ, ಅನ್ನದ ಜೊತೆಗೆ ಈ ಗ್ರೇವಿ ಬೆರೆಸಿಕೊಳ್ಳಬೇಕಾದರೆ ಮಾತ್ರ 2 ಕಪ್‌ ಚಿಕನ್ ಬೇಯಿಸಿದ ನೀರನ್ನು ಹಾಕಿಕೊಂಡು ಕುದಿಸಬೇಕು. ತಳ ಹಿಡಿಯದಂತೆ ಕೈಯಾಡಿಸುತ್ತಾ ಇರಬೇಕು. ಕೊನೆಯಲ್ಲಿ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಉದುರಿಸಿ. ಘಮ ಘಮ ಚಿಕನ್ ಗ್ರೇವಿ ಸಿದ್ಧ.

ಚಿಕನ್ ಮಸಾಲ

ಬೇಕಾಗುವ ಸಾಮಗ್ರಿಗಳು: ಚಿಕನ್ – 1 ಕೆಜಿ, ಕೆಂಪು ಮೆಣಸಿನಕಾಯಿ – 8, ಈರುಳ್ಳಿ – 2, ಟೊಮೆಟೊ – 2, ಗೋಡಂಬಿ – 2 ಚಮಚ, ಅರಿಸಿಣ – 1 ಚಮಚ, ಅಡುಗೆ ಎಣ್ಣೆ- 2 ಚಮಚ, ರುಚಿಗೆ ತಕ್ಕಷ್ಟು ಉಪ್ಪು, ದನಿಯಾ ಪುಡಿ- 1 ಚಮಚ ಗರಂಮಸಾಲೆ – 2 ಚಮಚ, ಕಸೂರಿ ಮೇಥಿ- 1 ಚಮಚ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ರುಚಿಗೆ ತಕ್ಕಷ್ಟು ಉಪ್ಪು.

ತಯಾರಿಕೆ ವಿಧಾನ: ಕುಕರ್‌ನಲ್ಲಿ 1 ಕೆ.ಜಿ ಚಿಕನ್, 3 ಕಪ್‌ ನೀರು ಅದಕ್ಕೆ ಸ್ವಲ್ಪ ಉಪ್ಪು ಮತ್ತು ಅರಿಸಿನ ಪುಡಿ ಹಾಕಿ ಬೇಯಿಸಿ ಇಟ್ಟುಕೊಳ್ಳಿ. ಪಕ್ಕದಲ್ಲಿ ಮತ್ತೊಂದು ಪಾತ್ರೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ. ಅದಕ್ಕೆ ಈರುಳ್ಳಿ ಹಾಕಿ, ಬಣ್ಣ ಬದಲಾಗುವವರೆಗೂ ಹುರಿಯಿರಿ. ನಂತರ ಟೊಮೆಟೊ, ಗರಂಮಸಾಲೆ, ಕಸ್ತೂರಿ ಮೇಥಿ, ಶುಂಠಿ–ಬೆಳ್ಳುಳ್ಳಿ ಪೇಸ್ಟ್ ಸೇರಿಸಿ ಬೆರೆಸಿ ಹುರಿದುಕೊಳ್ಳಿ.

ಇದಕ್ಕೆ ಅರ್ಧ ಚಮಚ ಅರಿಸಿನ, ಉಪ್ಪು, ಖಾರದಪುಡಿ ಹಾಕಿ ಕಂದು ಬಣ್ಣ ಬರುವರೆಗೆ ಹುರಿದುಕೊಳ್ಳಿ. ಚಿಕನ್‌ ಅನ್ನು ಈ ಮಿಶ್ರಣಕ್ಕೆ ಸೇರಿಸಿ ರುಚಿಗೆ ತಕ್ಕಷ್ಟು ಉಪ್ಪು ಹಾಕಿ. ಹೋಳುಗಳಿಗೆ ಮಸಾಲೆ ಹಿಡಿಯುವವರೆಗೆ ಕೈಯಾಡಿಸಿ. ನಂತರ ಒಂದು ಕಪ್ ನೀರು ಹಾಕಿ ಮತ್ತೆ ಎಲ್ಲವನ್ನೂ ಮಿಶ್ರಣ ಮಾಡಿ ಸಣ್ಣ ಉರಿಯಲ್ಲಿ ಚಿಕನ್ ಬೇಯುವವರೆಗೆ ಬೇಯಿಸಿ. ಚೆನ್ನಾಗಿ ಕುದ್ದು, ಮಾಂಸ ಬೆಂದು ಮಂದ ಆಗುವವರೆಗೂ ಕುದಿಸಿ ಕೊತ್ತಂಬರಿ ಸೊಪ್ಪಿನಿಂದ ಅಲಂಕರಿಸಿ. ಕೊತ್ತಂಬರಿ ಸೊಪ್ಪನ್ನು ಉದುರಿಸಿ. ಈಗ ಚಿಕನ್ ಮಸಾಲ ಸವಿಯಲು ರೆಡಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT