₹ 1.5 ಕೋಟಿ ಮೌಲ್ಯದ ವಿದೇಶಿ ಸಿಗರೇಟ್‌ ವಶ

ಬುಧವಾರ, ಜೂನ್ 26, 2019
29 °C
ಚಿತ್ರ ಸಹಿತ ಎಚ್ಚರಿಕೆ ಸಂದೇಶವಿಲ್ಲದೆ ಅಕ್ರಮ ಸಾಗಣೆ

₹ 1.5 ಕೋಟಿ ಮೌಲ್ಯದ ವಿದೇಶಿ ಸಿಗರೇಟ್‌ ವಶ

Published:
Updated:

ಬೆಂಗಳೂರು: ಹತ್ತಿ ಬಟ್ಟೆ ಎಂದು ಪೆಟ್ಟಿಗೆಗಳ ಮೇಲೆ ಬರೆದು ರೈಲಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹1.5 ಕೋಟಿ ಮೌಲ್ಯದ ವಿವಿಧ ಬ್ರ್ಯಾಂಡ್‌ಗಳ ವಿದೇಶಿ ಸಿಗರೇಟ್‌ಗಳನ್ನು ಇಲ್ಲಿನ ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ವಿದೇಶಿ ತಯಾರಿಕೆ ಸಿಗರೇಟ್‌ಗಳನ್ನು ರಟ್ಟಿನ ಬಾಕ್ಸ್‌ಗಳಲ್ಲಿ ತುಂಬಿ ‘ಯಶವಂತಪುರ ದುರಂತೊ ಎಕ್ಸ್‌ಪ್ರೆಸ್‌’ ರೈಲಿನಲ್ಲಿ ಹೌರಾದಿಂದ ಬೆಂಗಳೂರಿಗೆ ಸಾಗಣೆ ಮಾಡಲಾಗುತ್ತಿತ್ತು. ಗುಪ್ತಚರ ವಿಭಾಗ ನೀಡಿದ ಸುಳಿವು ಆಧರಿಸಿ ಕಸ್ಟಮ್ಸ್‌ ಅಧಿಕಾರಿಗಳು ಸಿಗರೇಟ್‌ ಪೆಟ್ಟಿಗೆಗಳನ್ನು ಜಪ್ತಿ ಮಾಡಿದ್ದಾರೆ.

ಇದೇ 8ರಂದು ಕಸ್ಟಮ್ಸ್‌ ಅಧಿಕಾರಿಗಳು ಯಶವಂತಪುರ ರೈಲು ನಿಲ್ದಾಣದಲ್ಲಿ ಇಳಿಸಲಾಗಿದ್ದ ಪಾರ್ಸಲ್‌ಗಳನ್ನು ಪರಿಶೀಲಿಸಿದಾಗ 58 ರಟ್ಟಿನ ಡಬ್ಬಗಳಲ್ಲಿದ್ದ 5.86 ಲಕ್ಷ ಸಿಗರೇಟ್‌ಗಳು ಪತ್ತೆಯಾದವು.

ಆನಂತರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರಿಗೆ ಹೊರಟಿದ್ದ ಸೂಪರ್‌ ಫಾಸ್ಟ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ 15 ಡಬ್ಬಗಳಲ್ಲಿದ್ದ 1.5 ಲಕ್ಷ ಸಿಗರೇಟ್‌ಗಳನ್ನು ವಶಪಡಿಸಿಕೊಂಡರು.

ಆರೋಗ್ಯ ಇಲಾಖೆ ಕಡ್ಡಾಯಗೊಳಿಸಿರುವ ಚಿತ್ರ ಸಹಿತ ಎಚ್ಚರಿಕೆ ಸಂದೇಶ ಪ್ಯಾಕ್‌ಗಳ ಮೇಲೆ ಇಲ್ಲದಿರುವುದರಿಂದ ಸಿಗರೇಟ್‌ಗಳ ಮಾರಾಟ ನಿಷೇಧಿಸಲಾಗಿದೆ. ಅಲ್ಲದೆ, ಇದನ್ನು ವಿದೇಶದಿಂದ ಅಕ್ರಮ ಸಾಗಣೆ ಮಾಡಿರುವ ಶಂಕೆಯಿದೆ ಎಂದು ನಗರ ಕಸ್ಟಮ್ಸ್‌ ಕಮಿಷನರ್‌ ಕಚೇರಿಯ ಹೆಚ್ಚುವರಿ ಕಮಿಷನರ್‌ ರಮಣರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಾಜ್ಯದೊಳಕ್ಕೆ ಅಕ್ರಮವಾಗಿ ಸಾಗಿಸುವ ವಸ್ತುಗಳ ಮೇಲೆ ನಿಗಾ ಇಡಲಾಗಿದೆ ಎಂದೂ ಪ್ರಕಟಣೆ ತಿಳಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !