ಗಣೇಶ ಹಬ್ಬ: ನಿರಾಕ್ಷೇಪಣಾ ಪತ್ರ ನೀಡಲು ಏಕಗವಾಕ್ಷಿ

7

ಗಣೇಶ ಹಬ್ಬ: ನಿರಾಕ್ಷೇಪಣಾ ಪತ್ರ ನೀಡಲು ಏಕಗವಾಕ್ಷಿ

Published:
Updated:

ಬೆಂಗಳೂರು: ಗಣೇಶ ಹಬ್ಬದಂದು ಮೂರ್ತಿ ಪ್ರತಿಷ್ಠಾಪನೆಗಾಗಿ ಸಾರ್ವಜನಿಕ ಸಂಘ–ಸಂಸ್ಥೆಗಳಿಗೆ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ನೀಡಲು ಏಕಗವಾಕ್ಷಿ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.

ಬಿಬಿಎಂಪಿಯ ಎಲ್ಲ ವಲಯಗಳ ಜಂಟಿ ಆಯುಕ್ತರ ಕಚೇರಿಯಲ್ಲೇ ಆಯಾ ಇಲಾಖೆಯ ಅಧಿಕಾರಿಗಳು, ಒಂದೇ ಸೂರಿನಡಿ ಎನ್‌ಒಸಿ ಒದಗಿಸಲಿದ್ದಾರೆ.

ವ್ಯವಸ್ಥೆ ಜಾರಿ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿರುವ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ‘ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬೆಸ್ಕಾಂ ಅಧಿಕಾರಿಗಳು ಒಂದೇ ಸೂರಿನಡಿ ಎನ್‌ಒಸಿ ನೀಡಲು ಕ್ರಮ ಕೈಗೊಳ್ಳಬೇಕು’ ಎಂದಿದ್ದಾರೆ.

‘ವ್ಯವಸ್ಥೆ ಜಾರಿಗೆ ಅನುಕೂಲವಾಗುವಂತೆ ಎಲ್ಲ ಇಲಾಖೆಯವರು ಬಿಬಿಎಂಪಿಯ ವಲಯಗಳ ಜಂಟಿ ಆಯುಕ್ತರ ಕಚೇರಿಯಲ್ಲಿ ಒಬ್ಬೊಬ್ಬ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಸಂಘ–ಸಂಸ್ಥೆಗಳು ಕಚೇರಿಯಿಂದ ಕಚೇರಿಗೆ ಅಲೆದಾಡುವುದನ್ನು ತಪ್ಪಿಸಬೇಕು’ ಎಂದು ಪರಮೇಶ್ವರ್ ಹೇಳಿದ್ದಾರೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !