ಎಸಿಬಿ ರದ್ದುಪಡಿಸಿ, ಲೋಕಾಯುಕ್ತ ಬಲಪಡಿಸಿ: ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ

7

ಎಸಿಬಿ ರದ್ದುಪಡಿಸಿ, ಲೋಕಾಯುಕ್ತ ಬಲಪಡಿಸಿ: ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ

Published:
Updated:
Deccan Herald

ಬೆಂಗಳೂರು: ‘ಭ್ರಷ್ಟಾಚಾರ ಮುಕ್ತ ರಾಜ್ಯ ನಿರ್ಮಾಣಕ್ಕಾಗಿ ಎಸಿಬಿಯನ್ನು ರದ್ದುಪಡಿಸಿ, ಲೋಕಾಯುಕ್ತವನ್ನು ಬಲಪಡಿಸಬೇಕು’ ಎಂದು ಒತ್ತಾಯಿಸಿ ‘ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ’ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. 

ಆನಂದರಾವ್‌ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ್ದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ, ‘ಎಲ್ಲಿಯವರೆಗೆ ಎಸಿಬಿ ಇರುತ್ತದೆಯೋ ಅಲ್ಲಿಯವರೆಗೆ ಭ್ರಷ್ಟಾಚಾರ ನಿರ್ಮೂಲನೆ ಸಾಧ್ಯವಿಲ್ಲ’ ಎಂದು ಹೇಳಿದರು.

‘ಎಸಿಬಿ ರದ್ದುಪಡಿಸುವಂತೆ ಒತ್ತಾಯಿಸಿ ಹಲವು ಸಂಘಟನೆಗಳು ಸೇರಿಕೊಂಡು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿವೆ. ರಾಜ್ಯದಲ್ಲಿ ಭ್ರಷ್ಟಾಚಾರ ಯಾವ ರೀತಿ ನಡೆಯುತ್ತಿದೆ ಎಂಬುದನ್ನು ವಿವರಿಸಿ 44 ಪುಟಗಳ ಅಫಿಡ್‌ವಿಟ್‌ ಸಹ ನೀಡಿವೆ’ ಎಂದರು. 

ವೇದಿಕೆ ಅಧ್ಯಕ್ಷ ರವಿಕೃಷ್ಣಾರೆಡ್ಡಿ, ‘ವಿಧಾನಸಭಾ ಚುನಾವಣೆಗೂ ಮುನ್ನ ಎಚ್‌.ಡಿ.ಕುಮಾರಸ್ವಾಮಿಯವರು, ಎಸಿಬಿ ರಚನೆಯನ್ನು ಖಂಡಿಸಿದ್ದರು. ಈಗ ಅವರೇ ಮುಖ್ಯಮಂತ್ರಿ ಆಗಿದ್ದು, ಎಸಿಬಿಯನ್ನು ರದ್ದುಪಡಿಸಬೇಕು. ಖಾಲಿ ಇರುವ ಉಪ ಲೋಕಾಯುಕ್ತ ಹುದ್ದೆಯನ್ನು ಭರ್ತಿ ಮಾಡಬೇಕು’ ಎಂದು ಆಗ್ರಹಿಸಿದರು.

‘ಬಿಜೆಪಿ, ರಾಜ್ಯದ ಅತಿದೊಡ್ಡ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ. ಅದರ ನಾಯಕ ಬಿ.ಎಸ್‌.ಯಡಿಯೂರಪ್ಪ ಅವರೂ ಎಸಿಬಿ ಬಗ್ಗೆ ತುಟಿ ಬಿಚ್ಚುತ್ತಿಲ್ಲ’ ಎಂದು ದೂರಿದರು. 

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !