100 ಕೆ.ಜಿ. ಚಿನ್ನ ಅಕ್ರಮ ಸಾಗಣೆ: ಐವರ ಬಂಧನ

ಶುಕ್ರವಾರ, ಏಪ್ರಿಲ್ 19, 2019
27 °C

100 ಕೆ.ಜಿ. ಚಿನ್ನ ಅಕ್ರಮ ಸಾಗಣೆ: ಐವರ ಬಂಧನ

Published:
Updated:

ತಿರುವನಂತಪುರ: ಕಳೆದ ಆರು ತಿಂಗಳಲ್ಲಿ ಸುಮಾರು 100 ಕೆ.ಜಿ. ಚಿನ್ನವನ್ನು ಅಕ್ರಮವಾಗಿ ಸಾಗಿಸಲು ನೆರವಾದ ಆರೋಪಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ.

ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಐವರು ಕಾರ್ಯನಿರ್ವಹಿಸುತ್ತಿದ್ದರು. ಬೇಹುಗಾರಿಕೆ ಮಹಾನಿರ್ದೇಶನಾಲಯದ ಅಧಿಕಾರಿಗಳು ಈ ಪ್ರಕರಣವನ್ನು ಪತ್ತೆ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದಾಗ ಇಬ್ಬರು ಪ್ರಯಾಣಿಕರನ್ನು ಬಂಧಿಸಲಾಗಿತ್ತು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿದಾಗ ಅಕ್ರಮ ಸಾಗಾಣಿಕೆಯ ವ್ಯಾಪಕ ಜಾಲವಿರುವುದು ಪತ್ತೆಯಾಯಿತು.

ವಿಮಾನದಲ್ಲಿ ಚಿನ್ನ ಸಾಗಿಸಲು ಈ ಐವರು ನೆರವಾಗುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !