ಜಿಲ್ಲೆಯಲ್ಲಿ ಉತ್ತಮ ಮಳೆ

7

ಜಿಲ್ಲೆಯಲ್ಲಿ ಉತ್ತಮ ಮಳೆ

Published:
Updated:
Deccan Herald

ಚಾಮರಾಜನಗರ: ಜಿಲ್ಲೆಯಾದ್ಯಂತ ಭಾನುವಾರ ರಾತ್ರಿಯಿಂದೀಚೆಗೆ ಉತ್ತಮ ಮಳೆಯಾಗುತ್ತಿದೆ. ಜುಲೈ ತಿಂಗಳು ಹಾಗೂ ಆಗಸ್ಟ್‌ ಆರಂಭದಲ್ಲಿ ಕಡಿಮೆ ಮಳೆಯಾಗಿದ್ದರಿಂದ ಆತಂಕದಲ್ಲಿದ್ದ ರೈತರ ಮೊಗದಲ್ಲಿ ಇದು ಮಂದಹಾಸ ಮೂಡಿಸಿದೆ.

ಜಿಲ್ಲಾ ಕೇಂದ್ರ ಚಾಮರಾಜನಗರ ಸೇರಿದಂತೆ ಜಿಲ್ಲೆಯಾದ್ಯಂತ ಭಾನುವಾರ ಬೆಳಿಗ್ಗೆಯಿಂದಲೇ ಮೋಡದ ವಾತಾವರಣ ಇತ್ತು. ಬಿಟ್ಟು ಬಿಟ್ಟು ಮಳೆಯಾಗುತ್ತಿತ್ತು. ಆದರೆ, ರಾತ್ರಿ 10ರ ನಂತರ ಬೆಳಿಗ್ಗೆಯವರೆಗೂ ಉತ್ತಮವಾಗಿ ಮಳೆ ಬಿದ್ದಿದೆ. 

ಸೋಮವಾರ ಮಧ್ಯಾಹ್ನದವರೆಗೆ ಮಳೆ ಬಿಡುವು ಕೊಟ್ಟಿತ್ತು. ಮೂರು ಗಂಟೆಯ ನಂತರ ರಾತ್ರಿವರೆಗೂ ಜಿಟಿ ಜಿಟಿ ಮಳೆಯಾಗಿದೆ. 

ಸೋಮವಾರ ಬೆಳಿಗ್ಗೆ 8.30‌ರವರೆಗೆ ಕಳೆದ 24 ಗಂಟೆಗಳಲ್ಲಿ ಜಿಲ್ಲೆಯಲ್ಲಿ 5 ಮಿ.ಮೀ ಮಳೆಯಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅತೀ ಹೆಚ್ಚು ಅಂದರೆ 9 ಮಿ.ಮೀ ಮಳೆಯಾಗಿದೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿ 3, ಯಳಂದೂರು ತಾಲ್ಲೂಕಿನಲ್ಲಿ 6 ಮಿ.ಮೀ ಮಳೆ ಬಿದ್ದಿದೆ.

ಇನ್ನೆರಡು ದಿನ ಮಳೆ: ಹವಾಮಾನ ಮುನ್ಸೂಚನೆ ಪ್ರಕಾರ, ಜಿಲ್ಲೆಯಾದ್ಯಂತ ಇನ್ನೂ ಎರಡು ದಿನಗಳ ಕಾಲ ಇದೇ ರೀತಿ ಮಳೆಯಾಗಲಿದೆ.

 

 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !