ಭಯದ ವಾತಾವರಣದಲ್ಲಿ ಕಲಿಯುತ್ತಿರುವ ಸರ್ಕಾರಿ ಶಾಲೆಯ ಮಕ್ಕಳು

7

ಭಯದ ವಾತಾವರಣದಲ್ಲಿ ಕಲಿಯುತ್ತಿರುವ ಸರ್ಕಾರಿ ಶಾಲೆಯ ಮಕ್ಕಳು

Published:
Updated:
Deccan Herald

ದಾಬಸ್‌ಪೇಟೆ: ನೆಲಮಂಗಲ ತಾಲ್ಲೂಕಿನ ದಾಸೇನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಛಾವಣಿ ಕುಸಿಯುವ ಸ್ಥಿತಿಯಲ್ಲಿದೆ. ಮಕ್ಕಳು ಪ್ರತಿದಿನ ಆತಂಕದಿಂದಲೇ ಪಾಠ ಕೇಳಬೇಕಾದ ಸ್ಥಿತಿ ಒದಗಿದೆ. ಮೂರು ವರ್ಷಗಳ ಹಿಂದೆ ಒಂದು ಭಾಗದ ಗೋಡೆ ಬಿದ್ದಿದೆ. ಉಳಿದ ಗೋಡೆಗಳೂ ಶಿಥಿಲಗೊಂಡಿವೆ. 

ಸದ್ಯ 57 ವಿದ್ಯಾರ್ಥಿಗಳು ಇಲ್ಲಿ ಓದುತ್ತಿದ್ದಾರೆ. ಶಾಲೆಯ ಸ್ಥಿತಿ ಕಂಡು ಪೋಷಕರು ತಮ್ಮ ಮಕ್ಕಳನ್ನು ಇಲ್ಲಿಗೆ ಸೇರಿಸಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ 87 ವರ್ಷದ ಇತಿಹಾಸ ಹೊಂದಿರುವ ಶಾಲೆಯು ಮುಚ್ಚುವ ಆತಂಕ ಎದುರಿಸುತ್ತಿದೆ.

ಶಾಲೆಗೆ ಹೊಸ ಕಟ್ಟಡ ಕಟ್ಟಿಕೊಡಿ ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದರೂ ಪ್ರಯೋಜನ ಆಗಿಲ್ಲ ಎಂದು ಹಳೇ ವಿದ್ಯಾರ್ಥಿಗಳು ದೂರಿದ್ದಾರೆ.
 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !