ಗುರುವಾರ , ಡಿಸೆಂಬರ್ 5, 2019
19 °C

ಚುನಾವಣೆ ಬಳಿಕ ಬಿಜೆಪಿ ಸರ್ಕಾರ ಪತನ: ಮಹದೇವಪ್ಪ

Published:
Updated:
Prajavani

ಕೊಳ್ಳೇಗಾಲ: ‘ಉಪ ಚುನಾವಣೆಯಲ್ಲಿ ಅನರ್ಹ ಶಾಸಕರು ಸೋತು ಮತ್ತೊಮ್ಮೆ ಅನರ್ಹರಾಗುತ್ತಾರೆ' ಎಂದು ಕಾಂಗ್ರೆಸ್‌ ಮುಖಂಡ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮತದಾರರು ಪ್ರಜ್ಞಾವಂತರಾಗಿದ್ದಾರೆ. ಯಾರನ್ನು ಗೆಲ್ಲಿಸಬೇಕು ಎಂಬುದು ತಿಳಿದಿದೆ. ನಮ್ಮ ಎಲ್ಲ ಅಭ್ಯರ್ಥಿಗಳೂ ಗೆಲುವು ಸಾಧಿಸಲಿದ್ದಾರೆ. ಪ್ರಜಾಪ್ರಭುತ್ವಕ್ಕೆ ಮಾರಕವಾಗಿ ಬಿಜೆಪಿ ನಡೆದುಕೊಂಡು ಹೋಗುತ್ತಿದೆ. ಈ ಸರ್ಕಾರದ ಆಯಸ್ಸು ಕೆಲವು ದಿನಗಳು ಮಾತ್ರ. ಚುನಾವಣೆ ಫಲಿತಾಂಶದ ಬಳಿಕ ಸರ್ಕಾರ ಇರುವುದಿಲ್ಲ. ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಜನಪರ ಕೆಲಸ ಮಾಡುತ್ತದೆ’ ಎಂದು ಭವಿಷ್ಯ ನುಡಿದರು. 

‘ಅನರ್ಹ ಶಾಸಕ ಎಚ್.ವಿಶ್ವನಾಥ್ ಸ್ಥಿತಿ ಗೊಂದಲಮಯವಾಗಿದೆ. ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ಅವರು ಜೆಡಿಎಸ್ ಶಾಸಕರಾದರು, ರಾಜ್ಯ ಘಟಕದ ಅಧ್ಯಕ್ಷರಾದರು. ಈಗ ಬಿಜೆಪಿ ಸೇರಿದ್ದಾರೆ. ಅವರೇ ಪಕ್ಷಾಂತರಿಗಳ ಬಗ್ಗೆ ಬರೆದು ಅವರೇ ಪಕ್ಷಾಂತರಿಯಾಗಿದ್ದಾರೆ. ಅವರ ಮಾತನ್ನು ಯಾರೂ ಗಂಭೀರವಾಗಿ ಪರಿಗಣಿಸುವುದಿಲ್ಲ. ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿರುವ ಕೋಮುವಾದಿ ಪಕ್ಷಕ್ಕೆ ಸೇರಿದ ವಿಶ್ವನಾಥ್‍ಗೆ ನಾಚಿಕೆ ಆಗಬೇಕು. ಕಾಂಗ್ರೆಸ್ಸನ್ನು ಒಡೆಯಲು ಯಾರಿಗೂ ಸಾಧ್ಯವಿಲ್ಲ. ಎಲ್ಲ ಮುಖಂಡರು ಒಟ್ಟಾಗಿ ಉಪ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದಾರೆ’ ಎಂದರು.

ನಗರಸಭೆ ಸದಸ್ಯ ಮಂಜುನಾಥ್, ಪುಷ್ಪಲತಾ, ಮುಖಂಡ ಶಾಂತರಾಜು, ರಾಚಪ್ಪ, ಅರುಣ್ ಮತ್ತಿತರರು ಇದ್ದರು. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು