ಕುಲಪತಿಗಳ ಜೊತೆ ಜಿಟಿಡಿ ಸಭೆ ಇಂದು

7

ಕುಲಪತಿಗಳ ಜೊತೆ ಜಿಟಿಡಿ ಸಭೆ ಇಂದು

Published:
Updated:
Prajavani

ಬೆಂಗಳೂರು: ‘ಬಿ.ಎ ಕೋರ್ಸ್‌ನ ಪಠ್ಯಕ್ರಮವನ್ನು ಈಗಿನ ಸಂದರ್ಭಕ್ಕೆ ತಕ್ಕಂತೆ ಮೇಲ್ದೆರ್ಜೆಗೇರಿಸಲು ನಿರ್ಧರಿಸಲಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ತಿಳಿಸಿದರು.

ಮಾಧ್ಯಮ ಪ್ರತಿನಿಧಿಗಳ ಜೊತೆ ಬುಧವಾರ ಮಾತನಾಡಿದ ಅವರು, ‘ಈ ಉದ್ದೇಶದಿಂದ ಗುರುವಾರ (ಜ.10) ಎಲ್ಲ
ವಿಶ್ವವಿದ್ಯಾಲಯಗಳ ಕುಲಪತಿಗಳ ಸಭೆ ನಡೆಯಲಿದೆ. ತಜ್ಞರ ಸಮಿತಿ ರಚಿಸುವ ಬಗ್ಗೆ ಸಭೆಯಲ್ಲಿ ಬಗ್ಗೆ ಚರ್ಚಿಸಲಾಗುವುದು’ ಎಂದರು.

‘ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ಉಪನ್ಯಾಸಕರ ನೇಮಕ ಮಾಡಲು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಲಾಗಿದೆ. ಅಲ್ಲಿಂದ ಒಪ್ಪಿಗೆ ಬಂದ ತಕ್ಷಣ ನೇಮಕ ಪ್ರಕ್ರಿಯೆ ನಡೆಯಲಿದೆ. 3,800 ಉಪನ್ಯಾಸಕರನ್ನು ನೇಮಿಸಲು ನಿರ್ಧರಿಸಲಾಗಿದೆ’ ಎಂದು ಹೇಳಿದರು.

‘ಆಡಳಿತ ವ್ಯವಹಾರ ಬಿಟ್ಟು ಶೈಕ್ಷಣಿಕ ಗುಣಮಟ್ಟದ ಕಡೆಗೆ ಗಮನ ಕೊಡುವಂತೆ ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕರಿಗೆ ಸೂಚಿಸಲಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಬರುವ ಕಾಲೇಜುಗಳಿಗೆ ನಿರಂತರ ಭೇಟಿ ಕೊಟ್ಟು ಅಲ್ಲಿನ ವ್ಯವಸ್ಥೆ ಸುಧಾರಣೆಗೆ ಆದ್ಯತೆ ನೀಡುವಂತೆ ತಿಳಿಸಲಾಗಿದೆ’ ಎಂದರು.

‘ವಿಶ್ವವಿದ್ಯಾಲಯಗಳ ಮೂಲಸೌಕರ್ಯ ಅಭಿವೃದ್ಧಿಗೆ ನೀಡಲಾದ ಅನುದಾನ ಕ್ರಿಯಾಯೋಜನೆ ಬಗ್ಗೆ ಗುರುವಾರ ನಡೆಯಲಿರುವ ಕುಲಪತಿಗಳ ಸಭೆಯಲ್ಲಿ ಮಾಹಿತಿ ಪಡೆಯಲಾಗುವುದು. ವಿಶ್ವವಿದ್ಯಾಲಯಗಳಿಗೆ ಈ ಹಿಂದೆ ನೀಡಿದ್ದ ನಿರ್ದೇಶನಗಳು ಪಾಲನೆ ಆಗಿದೆಯೇ ಎಂದು ಗಮನಿಸಲಾಗುವುದು’ ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !