ಮಂಗಳವಾರ, ನವೆಂಬರ್ 19, 2019
28 °C

‘ಮಹತ್ವಾಕಾಂಕ್ಷೆಯ ಗುರಿ ಹೊಂದಿ’

Published:
Updated:
Prajavani

ಮೈಸೂರು: ‘ನಮ್ಮ ಭವ್ಯ ಪರಂಪರೆ ತಿಳಿಯುವ ಮನೋಭಾವವನ್ನು ಪ್ರತಿಯೊಬ್ಬರೂ ರೂಢಿಸಿಕೊಳ್ಳಬೇಕು’ ಎಂದು ಕಲಾವಿದ ಕೆ.ವಿ.ಸುಬ್ರಹ್ಮಣ್ಯ ಕಿವಿಮಾತು ಹೇಳಿದರು.

ಇಲ್ಲಿನ ಸಿದ್ಧಾರ್ಥ ನಗರದಲ್ಲಿರುವ ಚಾಮರಾಜೇಂದ್ರ ಕಲಾ(ಕಾವಾ) ಕಾಲೇಜಿನಲ್ಲಿ ಭಾನುವಾರ ನಡೆದ ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿದ ಅವರು ಮಾತನಾಡಿ, ‘ಜೀವನದಲ್ಲಿ ಮಹತ್ವಾಕಾಂಕ್ಷೆಯ ಗುರಿ ಹೊಂದಬೇಕು’ ಎಂದರು.

‘ಸಹೃದಯತೆ ಎಂಬುದೇ ಇಂದು ಮರೆಯಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಸಹೃದಯತೆ ಮೂಡಿಸಲು ಇಂತಹ ಕಾರ್ಯಕ್ರಮ ಅವಶ್ಯ. ಆ ಮೂಲಕ ನಿಮ್ಮ ಗುರುಗಳು ಅಥವಾ ಹಿರಿಯರು ಯಾವುದೇ ಕ್ಷೇತ್ರದಲ್ಲಿ ಇದ್ದರೂ ಅವರನ್ನು ಗೌರವಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ಕಾವಾ ಕಾಲೇಜಿನ ಡೀನ್ ಬಿ.ಆರ್.ಪೂರ್ಣಿಮಾ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)