ಎಚ್‌ಎಎಲ್‌ ನಿಲ್ದಾಣದ ಭದ್ರತೆಗೆ ತೊಡಕಾಗಿವೆ ಸುತ್ತಮುತ್ತಲ ಕಟ್ಟಡಗಳು!

ಶುಕ್ರವಾರ, ಏಪ್ರಿಲ್ 26, 2019
24 °C
ಮಾಲೀಕರು, ಗುತ್ತಿಗೆದಾರರ ವಿರುದ್ಧ ಎಫ್‌ಐಆರ್‌

ಎಚ್‌ಎಎಲ್‌ ನಿಲ್ದಾಣದ ಭದ್ರತೆಗೆ ತೊಡಕಾಗಿವೆ ಸುತ್ತಮುತ್ತಲ ಕಟ್ಟಡಗಳು!

Published:
Updated:

ಬೆಂಗಳೂರು: ಎಚ್‌ಎಎಲ್‌ ವಿಮಾನ ನಿಲ್ದಾಣದ ಸುತ್ತಮುತ್ತ 4 ಕಿ.ಮೀ. ವ್ಯಾಪ್ತಿಯಲ್ಲಿ ನಿರ್ಮಿಸಲಾಗಿರುವ ಅತೀ ಎತ್ತರದ ಕಟ್ಟಡಗಳ ಮಾಲೀಕರು ಹಾಗೂ ಗುತ್ತಿಗೆದಾರರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

‘ಅತೀ ಎತ್ತರದ ಕಟ್ಟಡಗಳಿಂದ ವಿಮಾನ ನಿಲ್ದಾಣದ ಭದ್ರತೆ ಹಾಗೂ ರಕ್ಷಣೆಗೆ ಧಕ್ಕೆ ಆಗುವ ಸಾಧ್ಯತೆ ಇದೆ’ ಎಂದು ಆರೋಪಿಸಿ ಎಚ್‌ಎಎಲ್‌ನ ಭರತ್ ಯಾದವ್ ಎಂಬುವರು ನೀಡಿದ ದೂರಿನಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಎಚ್‌ಎಎಲ್‌ ಪೊಲೀಸರು ಹೇಳಿದರು.

‘ನಿಲ್ದಾಣದ ಸುತ್ತಮುತ್ತ ಅತೀ ಎತ್ತರದ ಸಾಕಷ್ಟು ಕಟ್ಟಡಗಳು ಇರುವುದಾಗಿ ದೂರುದಾರರು ಆರೋಪಿಸಿದ್ದಾರೆ. ಈಗಷ್ಟೇ ದೂರು ದಾಖಲಾಗಿದ್ದು, ಆ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗುವುದು. ನಂತರ, ಅತೀ ಎತ್ತರದ ಕಟ್ಟಡಗಳನ್ನು ಪಟ್ಟಿ ಮಾಡಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ದೂರಿನ ವಿವರ: ‘ಎಚ್‌ಎಎಲ್ ವಿಮಾನ ನಿಲ್ದಾಣವನ್ನು ವಾಯುಸೇನೆ ಹಾಗೂ ಅತೀ ಗಣ್ಯ ವ್ಯಕ್ತಿಗಳ ಸಂಚಾರಕ್ಕೆ ಮೀಸಲಿಡಲಾಗಿದೆ. ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ರಾಷ್ಟ್ರದ ಗಣ್ಯರು ಇದೇ ನಿಲ್ದಾಣವನ್ನು ಬಳಸುತ್ತಿದ್ದಾರೆ. ವಾಯುಸೇನೆ ವಿಮಾನಗಳು ಸಹ ಇದೇ ನಿಲ್ದಾಣದಲ್ಲಿ ನಿತ್ಯ ತರಬೇತಿ ನಡೆಸುತ್ತವೆ’ ಎಂದು ಭರತ್‌ ಅವರು ದೂರಿನಲ್ಲಿ ತಿಳಿಸಿದ್ದಾರೆ.  

‘ವಿಮಾನಯಾನ ಸಚಿವಾಲಯದ ನಿಯಮದಂತೆ ನಿಲ್ದಾಣದ 4 ಕಿ.ಮೀ ವ್ಯಾಪ್ತಿಯಲ್ಲಿ ಅತೀ ಎತ್ತರದ ಕಟ್ಟಡ ನಿರ್ಮಿಸುವಂತಿಲ್ಲ. ಅದರ ಬಗ್ಗೆ ರಕ್ಷಣಾ ಸಚಿವಾಲಯ ಈಗಾಗಲೇ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಿದೆ. ಅಂಥ ನಿಯಮಗಳನ್ನು ಉಲ್ಲಂಘಿಸಿ ಕೆಲ ಮಾಲೀಕರು ಹಾಗೂ ಗುತ್ತಿಗೆದಾರರು, ಅತೀ ಎತ್ತರದ ಕಟ್ಟಡಗಳನ್ನು ನಿರ್ಮಿಸಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ’ ಎಂದು ದೂರಿನಲ್ಲಿ ಹೇಳಿದ್ದಾರೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !