‘ಅನುದಾನ ಬಳಸಿ, ಮುಖ್ಯವಾಹಿನಿಗೆ ಬನ್ನಿ’

7
ವೈದ್ಯಕೀಯ ತಪಾಸಣಾ ಶಿಬಿರ

‘ಅನುದಾನ ಬಳಸಿ, ಮುಖ್ಯವಾಹಿನಿಗೆ ಬನ್ನಿ’

Published:
Updated:
Deccan Herald

ವಿಜಯಪುರ: ಮಹಾನಗರ ಪಾಲಿಕೆಯಲ್ಲಿ ಅಂಗವಿಕಲರ ಅಭಿವೃದ್ಧಿಗೆ ಇರುವ ಶೇ 5ರಷ್ಟು ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು, ಅಂಗವಿಕಲರು ಮುಖ್ಯವಾಹಿನಿಗೆ ಬರಬೇಕು ಎಂದು ಪಾಲಿಕೆಯ ಸಾರ್ವಜನಿಕ ಆರೋಗ್ಯ, ಶಿಕ್ಷಣ ಹಾಗೂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ರಾಜಶೇಖರ ಮಗಿಮಠ ಹೇಳಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗವಿಕಲರ ವೈದ್ಯಕೀಯ ಮೌಲ್ಯಾಂಕನ ಶಿಬಿರದ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ವೈದ್ಯಕೀಯ ತಪಾಸಣಾ ಶಿಬಿರ ಉದ್ಘಾಟಿಸಿದ ಅವರು ಮಾತನಾಡಿದರು.

ಪಾಲಿಕೆ ಸದಸ್ಯ ರವೀಂದ್ರ ಲೋಣಿ ಮಾತನಾಡಿ, ಅಂಗವಿಕಲರು ಸಮಾಜದ ಮುಖ್ಯವಾಹಿನಿಗೆ ಬರಲು ಸ್ಥಳೀಯ ಸರ್ಕಾರ ಹಾಗೂ ಸಂಘ–ಸಂಸ್ಥೆಗಳು ಶ್ರಮಿಸಬೇಕು. ಹಲವು ಜನ ಅಂಗವಿಕಲರಲ್ಲಿ ಪ್ರತಿಭೆ ಅಡಗಿರುತ್ತದೆ. ಅಂತವರನ್ನು ಗುರುತಿಸಿ, ಪ್ರೋತ್ಸಾಹಿಸಬೇಕು ಎಂದರು.

ಎ.ಪಿ.ಡಿ ಸಂಸ್ಥೆಯ ಶಾಖಾ ವ್ಯವಸ್ಥಾಪಕ ಗುರುಶಾಂತ ಹಿರೇಮಠ ಮಾತನಾಡಿ, ಪಾಲಿಕೆಯ ವ್ಯಾಪ್ತಿಯಲ್ಲಿ 3000ಕ್ಕೂ ಹೆಚ್ಚು ಅಂಗವಿಕಲರಿದ್ದಾರೆ. ಅವರನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಪುನರ್ವಸತಿಗೊಳಿಸುವುದು ಎಲ್ಲರ ಜವಾಬ್ದಾರಿ ಎಂದರು.

ಅಂಗವಿಕಲರ ಪುನರ್ವಸತಿ ಕೇಂದ್ರದ ನೋಡಲ್ ಅಧಿಕಾರಿ ಡಾ.ಎಂ.ಸಿ.ಯಡವಣ್ಣವರ, ಪಾಲಿಕೆಯ ವ್ಯವಸ್ಥಾಪಕಿ ಗೀತಾ ನಿಂಬಾಳ್ಕರ ಇದ್ದರು. ಎ.ಪಿ.ಡಿ ಸಂಸ್ಥೆಯ ಆನಂದ ಗಣಾಚಾರಿ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !