ಮಾಸಾಶನ ಸಮಸ್ಯೆ ವಾರದಲ್ಲಿ ಪರಿಹಾರ

7
ಅಂಗವಿಕಲರ ಕುಂದುಕೊರತೆ ಸಭೆಯಲ್ಲಿ ತಹಶೀಲ್ದಾರ್‌ ಕೆ.ಪುರಂದರ ಭರವಸೆ

ಮಾಸಾಶನ ಸಮಸ್ಯೆ ವಾರದಲ್ಲಿ ಪರಿಹಾರ

Published:
Updated:
Deccan Herald

ಚಾಮರಾಜನಗರ: ‘ಸಾಮಾಜಿಕ ಭದ್ರತಾ ಯೋಜನೆಯಡಿ ಅರ್ಹ ಅಂಗವಿಕಲ ಫಲಾನುಭವಿಗಳಿಗೆ 5 ತಿಂಗಳಿಂದ ಮಾಸಾಶನ ದೊರೆಯುತ್ತಿಲ್ಲ ಎನ್ನುವ ದೂರು ಬಂದಿದೆ. ಒಂದು ವಾರದಲ್ಲಿ ಮಾಸಾಶನ ನೀಡಲಾಗುತ್ತದೆ’ ಎಂದು ತಹಶೀಲ್ದಾರ್‌ ಕೆ.ಪುರಂದರ ಶನಿವಾರ ಭರವಸೆ ನೀಡಿದರು. 

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ನಡೆದ ತಾಲ್ಲೂಕುಮಟ್ಟದ ಅಂಗವಿಕಲರ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಅಂಗವಿಕಲರಿಗೆ ಅನುಕೂಲವಾಗುವಂತೆ ರ‍್ಯಾಂಪ್‌ಗಳನ್ನು ನಿರ್ಮಿಸಬೇಕು ಎಂದು ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಇಲಾಖೆಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ ಎಂದು ಹೇಳಿದರು.

ಬುದ್ಧಿಮಾಂದ್ಯ ಮಕ್ಕಳಿಗೆ ಸೂಕ್ತ ಔಷಧ ವಿತರಿಸಬೇಕು. ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಸಹಾಯವಾಣಿ ಕೇಂದ್ರ ಕಾರ್ಯಾರಂಭ ಮಾಡುವಂತೆ ಅಂಗವಿಕಲ ಸದಸ್ಯರು ಕೋರಿದರು.

ಇದಕ್ಕೆ ಸ್ಪಂದಿಸಿದ ತಹಶೀಲ್ದಾರರು, ‘ಬಸ್‌ ನಿಲ್ದಾಣದಲ್ಲಿ ಸಹಾಯವಾಣಿ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯ ಸಮೀಪದಲ್ಲಿ ಪ್ರತ್ಯೇಕ ಸಹಾಯವಾಣಿ ಆರಂಭಕ್ಕೆ ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿ.ಮಹದೇವಸ್ವಾಮಿ, ಗೌರವಾಧ್ಯಕ್ಷ ಎನ್‌.ಕೃಷ್ಣಮೂರ್ತಿ, ಕಾರ್ಯದರ್ಶಿ ಮಂಟೇಲಿಂಗಯ್ಯ, ತಾಲ್ಲೂಕು ಅಧ್ಯಕ್ಷ ರಮೇಶ್ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !