ಸೋಮವಾರ, ಫೆಬ್ರವರಿ 24, 2020
19 °C
ಜಿಲ್ಲಾ ಪಂಚಾಯಿತಿಯ ಹರದನಹಳ್ಳಿ ಕ್ಷೇತ್ರದ ಉಪಚುನಾವಣೆ

ಕಾಂಗ್ರೆಸ್‌ನಿಂದ ರಮೇಶ್‌, ‌ಬಿಜೆಪಿಯಿಂದ ಶ್ರೀನಿವಾಸ ಕಣಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಹರದನಹಳ್ಳಿ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್‌ನಿಂದ ರಮೇಶ್‌ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ ಕಣಕ್ಕಿಳಿದಿದ್ದಾರೆ. 

ನಾಮಪತ್ರ ಸಲ್ಲಿಸಲು ಕೊನೆಯ ದಿನವಾದ ಗುರುವಾರ ಇಬ್ಬರೂ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾಧಿಕಾರಿ ಸೈಯದ್ ನಯೀಂ ಅಹಮದ್ ಅವರಿಗೆ ಉಮೇದುವಾರಿಕೆ ಸಲ್ಲಿಸಿದರು. 

ಪೂಜೆ: ಇಬ್ಬರೂ ಪ್ರತ್ಯೇಕವಾಗಿ ನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನಕ್ಕೆ ತೆರಳಿ, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು. ಅಲ್ಲಿಂದ ಮೆರವಣಿಗೆ ಮೂಲಕ ತಹಶೀಲ್ದಾರ್‌ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ರಮೇಶ್‌ ಅವರೊಂದಿಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್. ಮಹದೇವು, ಎಸ್.ಸೋಮನಾಯಕ ಇದ್ದರು. ಶ್ರೀನಿವಾಸ ಅವರೊಂದಿಗೆ ತಾಲ್ಲೂಕು ಪಂಚಾಯಿತಿ ಸದಸ್ಯ ಮಹದೇವಶೆಟ್ಟಿ, ಬಿಜೆಪಿ ಮುಖಂಡರಾದ ಸಿ. ಗುರುಸ್ವಾಮಿ, ಎಂ. ರಾಮಚಂದ್ರ, ಚನ್ನಂಜಪ್ಪ, ಎಪಿಎಂಸಿ ನಿರ್ದೇಶಕ ಹೆಗ್ಗೂರುಶೆಟ್ಟಿ ಇದ್ದರು.

ಒಬ್ಬ ಸ್ವತಂತ್ರ ಅಭ್ಯರ್ಥಿ: ‘ಪಕ್ಷೇತರ ಅಭ್ಯರ್ಥಿಯಾಗಿ ಶಂಭು ಎಂಬುವವರು ನಾಮಪತ್ರ ಸಲ್ಲಿಸಿದ್ದಾರೆ. ಮೂರು ನಾಮಪತ್ರಗಳು ಸಲ್ಲಿಕೆಯಾಗಿವೆ’ ಎಂದು ಚುನಾವಣಾಧಿಕಾರಿ ಸೈಯದ್‌ ನಯೀಂ ಅಹಮದ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು