ನ್ಯಾ. ದಿನೇಶ್ ಮಾಹೇಶ್ವರಿ ಭೇಟಿ ಮಾಡಿದ ಕುಮಾರಸ್ವಾಮಿ, ಪರಮೇಶ್ವರ

7

ನ್ಯಾ. ದಿನೇಶ್ ಮಾಹೇಶ್ವರಿ ಭೇಟಿ ಮಾಡಿದ ಕುಮಾರಸ್ವಾಮಿ, ಪರಮೇಶ್ವರ

Published:
Updated:

ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಪದೋನ್ನತಿ ಹೊಂದಿದ ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರನ್ನು ಗುರುವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.

‘ರಾಜ್ಯ ಹೈಕೋರ್ಟ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದ ಅವಧಿಯಲ್ಲಿ ಅವರು ನೀಡಿರುವ ಹಲವು ತೀರ್ಪುಗಳು ಅದರಲ್ಲೂ ನಗರದ ಸ್ವಚ್ಛತೆಗೆ ಸಂಬಂಧಿಸಿದಂತೆ ನೀಡಿರುವ ನಿರ್ದೇಶನ ಸರ್ಕಾರಕ್ಕೆ ಮಾರ್ಗಸೂಚಿಯಂತಿತ್ತು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ನ್ಯಾಯಮೂರ್ತಿಗಳ ಮುಂದಿನ ವೃತ್ತಿ ಜೀವನಕ್ಕೆ ಮುಖ್ಯಮಂತ್ರಿ ಶುಭ ಹಾರೈಸಿದರು.


ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ನೇಮಕಗೊಂಡ ಹೈಕೋರ್ಟ್‌ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಅವರನ್ನು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ ಅವರು ಅಭಿನಂದಿಸಿದರು.

 

ಬರಹ ಇಷ್ಟವಾಯಿತೆ?

  • 8

    Happy
  • 0

    Amused
  • 0

    Sad
  • 0

    Frustrated
  • 2

    Angry

Comments:

0 comments

Write the first review for this !