ಸೋಮವಾರ, ನವೆಂಬರ್ 30, 2020
27 °C

ಹೃದಯ ಸಮಸ್ಯೆ: ಮನೆ ಬಾಗಿಲಲ್ಲಿ ತಪಾಸಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜಯನಗರದ ಮಣಿಪಾಲ್ ಆಸ್ಪತ್ರೆಯು ಹೃದಯ ಆರೋಗ್ಯ ತಪಾಸಣೆ ಅಭಿಯಾನ ಹಮ್ಮಿಕೊಂಡಿದ್ದು, ವೈದ್ಯರು ರೋಗಿಗಳ ಮನೆ ಬಾಗಿಲಿಗೆ ತೆರಳಿ ತಪಾಸಣೆ ನಡೆಸಲಿದ್ದಾರೆ.

ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸದ ತೇಜಸ್ವಿ ಸೂರ್ಯ ಅವರು ಈ ಅಭಿಯಾನಕ್ಕೆ ಚಾಲನೆ ನೀಡಿದರು. 

ಆಸ್ಪತ್ರೆಯ ಹೃದ್ರೋಗತಜ್ಞ ಡಾ.ಕೆ.ಪಿ. ಶ್ರೀಹರಿ ದಾಸ್, ‘ಕೋವಿಡ್‌ನಿಂದ ಹೃದ್ರೋಗಿಗಳು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿರುವುದು ಗಮನಕ್ಕೆ ಬಂದಿದೆ. ಸಾಂಕ್ರಾಮಿಕ ರೋಗದ ಕಾರಣ ಜನತೆ ಮನೆಬಿಟ್ಟು ಹೊರಬರಲು ಭಯಪಡುತ್ತಿದ್ದಾರೆ. ಇದರಿಂದಾಗಿ ಕೆಲವರಲ್ಲಿ ಹೃದಯ ಸಮಸ್ಯೆ ಸಂಕೀರ್ಣ ಸ್ವರೂಪ ಪಡೆದುಕೊಳ್ಳುತ್ತಿದೆ. ಹೀಗಾಗಿಯೇ ರೋಗಿಗಳ ಮನೆ ಬಾಗಿಲಿಗೆ ತೆರಳಿ, ತಪಾಸಣೆ ಮಾಡುವ ಅಭಿಯಾನ ಹಮ್ಮಿಕೊಂಡಿದ್ದೇವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.