ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಲರಾ ಹರಡುವ ವಿಧಾನ ಹಾಗೂ ಮುನ್ನೆಚ್ಚರಿಕೆ ಕ್ರಮಗಳು

Last Updated 9 ಮಾರ್ಚ್ 2020, 9:29 IST
ಅಕ್ಷರ ಗಾತ್ರ

ಬೆಂಗಳೂರು: ಐಟಿ ತಾಣವೆಂದೇ ಹೆಸರಾಗಿರುವ ಬೆಂಗಳೂರಿನಲ್ಲಿ ಕೊರೊನಾ ಭೀತಿ ಇರುವಾಗಲೇ ಮಾರಕ ಕಾಲರಾ ರೋಗ ಪತ್ತೆಯಾಗಿದೆ.

ರಾಜಧಾನಿಯ ಆಗ್ನೇಯ ಭಾಗದ ಸರ್ಜಾಪುರ, ಕೋರಮಂಗಲ, ಎಚ್‌ಎಸ್‌ಆರ್‌ ಲೇಔಟ್‌, ಕಸವನಹಳ್ಳಿ, ಮಹದೇವಪುರ ಮತ್ತು ಬೊಮ್ಮನಹಳ್ಳಿಯಲ್ಲಿ ಕಾಲರಾ ಕಂಡುಬಂದಿದೆ.

ಕಾಲರಾ ಹರಡುವ ವಿಧಾನ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗೆಗಿನ ಮಾಹಿತಿ ಇಲ್ಲಿದೆ.

ಕಾಲರಾ ಕರುಳಿನ ಸೋಂಕಾಗಿದ್ದು ಇದು ವಿಬ್ರಿಯೊ ಕಾಲರಾ ಎಂಬಬ್ಯಾಕ್ಟೀರಿಯಾದಿಂದ ಹರಡುತ್ತದೆ. ಕಲುಷಿತ ನೀರು ಮತ್ತು ಸೋಂಕಿತ ಆಹಾರದಿಂದ ಸಾಂಕ್ರಾಮಿಕವಾಗಿ ಹರಡುತ್ತದೆ.

ವಿಬ್ರಿಯೊ ಕಾಲರಾ ಬ್ಯಾಕ್ಟೀರಿಯಾ ದೇಹವನ್ನು ಪ್ರವೇಶಿಸಿದ ಕೆಲವೇ ಗಂಟೆಗಳಲ್ಲಿ ಅಥವಾ ನಾಲ್ಕೈದು ದಿನಗಳ ಒಳಗಾಗಿ ಕಾಲರಾ ರೋಗದ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.ಅತಿಯಾದ ವಾಂತಿ, ಭೇದಿ ಕಾಣಿಸಿಕೊಂಡು ವ್ಯಕ್ತಿಯು ನಿತ್ರಾಣಗೊಳ್ಳುತ್ತಾನೆ. ಚಿಕಿತ್ಸೆ ಪಡೆಯದಿದ್ದರೆ ಸಾವು ಸಂಭವಿಸಬಹುದು.

ಮುನ್ನೆಚರಿಕೆ ಕ್ರಮಗಳು

* ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು

* ಸುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು

* ಹಣ್ಣ ಹಾಗೂ ಹಸಿ ತರಕಾರಿಯನ್ನು ತೊಳೆದು ಸೇವಿಸಬೇಕು

* ವಾಂತಿ ಅಥವಾ ಬೇಧಿ ಕಾಣಿಸಿಕೊಂಡ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT