ಶುಕ್ರವಾರ, ಮಾರ್ಚ್ 31, 2023
26 °C

ಬೇಸಿಗೆ ಕಾಲ: ಮುನ್ನೆಚ್ಚರಿಕೆ ವಹಿಸಲು ಆರೋಗ್ಯ ಇಲಾಖೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಬೇಸಿಗೆ ಕಾಲ ಆರಂಭವಾಗಿದೆ. ಈ ಅವಧಿಯಲ್ಲಿ ಅತಿಯಾದ ಉಷ್ಣಾಂಶದಿಂದ ನಾನಾ ರೀತಿಯ ಅನಾರೋಗ್ಯ ಪರಿಸ್ಥಿತಿಗಳು ಸಂಭವಿಸುವ ಸಾಧ್ಯತೆಗಳಿವೆ. ಹೀಗಾಗಿ, ಆರೋಗ್ಯ ಇಲಾಖೆ ಹಲವು ಸಲಹೆಗಳನ್ನು ನೀಡಿದೆ.

ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್‌ ಅವರು ಸುತ್ತೋಲೆ ಹೊರಡಿಸಿದ್ದಾರೆ.

ಬೇಸಿಗೆ ಕಾಲದಲ್ಲಿ ಅತಿಯಾದ ಉಷ್ಣಾಂಶದಿಂದ ಸಂಭವಿಸುವ ಅನಾರೋಗ್ಯ ಪರಿಸ್ಥಿತಿಗಳನ್ನು ತಡೆಯಲು ಸೂಕ್ತ ಕ್ರಮಕೈಗಳನ್ನು ಕೈಗೊಳ್ಳುವಂತೆ ಬಿಬಿಎಂಪಿ ಮತ್ತು ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.

ಸಲಹೆಗಳು: ಬಾಯಾರಿಕೆ ಇಲ್ಲದಿದ್ದರೂ ಪದೇ ಪ‍ದೇ ನೀರು ಕುಡಿಯಬೇಕು. ಪ್ರಯಾಣ ಸಮಯದಲ್ಲೂ ನೀರು ತೆಗೆದುಕೊಂಡು ಹೋಗಬೇಕು. ಹಣ್ಣು ಮತ್ತು ತರಕಾರಿಗಳನ್ನು ಹೆಚ್ಚು ಸೇವಿಸಬೇಕು. ಹತ್ತಿ ಬಟ್ಟೆ ಧರಿಸುವುದು ಉತ್ತಮ.

ರಾಜಧಾನಿಯಲ್ಲಿ ಮೇಲ್ಮೈ ಬಿಸಿ ಗಾಳಿ
ಬೆಂಗಳೂರು:
ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳಲ್ಲಿ ಮೇಲ್ಮೈಬಿಸಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉಷ್ಣಾಂಶವು ಗರಿಷ್ಠ 32 ಡಿಗ್ರಿ ಸೆಲಿಯಸ್ಸ್‌ ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ದಾಖಲಾಗುವ ಸಾಧ್ಯತೆಯಿದೆ. ಉಳಿದಂತೆ ನಗರದಲ್ಲಿ ನಿರ್ಮಲ ಆಕಾಶ ಇರಲಿದೆ. ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಬೇಸಿಗೆಯ ಧಗೆ ಕಾಣಿಸಿಕೊಂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು