ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ವಿರುದ್ಧ ರೋಗ ನಿರೋಧಕ ಶಕ್ತಿ ವೃದ್ಧಿಗೆ ಆಯುಷ್‌ ಇಲಾಖೆ ಸಲಹೆಗಳಿವು...

Last Updated 19 ಜುಲೈ 2020, 12:23 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ವೈರಸ್‌ ವಿರುದ್ಧ ದೇಹದಲ್ಲಿ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಆಯುಷ್‌ ಇಲಾಖೆಯು ನಾಗರಿಕರೆ ಕೆಲ ಸಲಹೆಗಳನ್ನು ನೀಡಿದೆ.

ಇಲಾಖೆ ನೀಡಿರುವ ಸಲಹೆಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ

* ಕುಡಿಯಲು ಯಾವಾಗಲೂ ಬಿಸಿನೀರು ಉಪಯೋಗಿಸಬೇಕು

* ಪ್ರತಿದಿನ ಯೋಗಾಸನ, ಪ್ರಾಣಾಯಾಮವನ್ನು ಕನಿಷ್ಠ 30 ನಿಮಿಷ ಮಾಡಬೇಕು

* ಅರಿಸಿನ, ಜೀರಿಗೆ, ಬೆಳ್ಳುಳ್ಳಿ ಮತ್ತು ಧನಿಯಾಗಳನ್ನು ಆಹಾರದಲ್ಲಿ ಬಳಸಬೇಕು

* ಅರಿಸಿನ ಬೆರೆಸಿದ ಹಾಲು ಕುಡಿಯುವುದು ಒಳ್ಳೆಯದು

* ಗಿಡಮೂಲಿಕೆ ಬಳಸಿ ತಯಾರಿಸಿ ಚಹಾವನ್ನು ಕುಡಿಯುವುದು

* ಪುದಿನ ಎಲೆಗಳನ್ನು ಬಿಸಿನೀರಿಗೆ ಹಾಕಿ, ಹಬೆಯನ್ನು ತೆಗೆದುಕೊಳ್ಳಬೇಕು

* ಕೆಮ್ಮು ಅಥವಾ ಗಂಟಲಿನ ಕಿರಿಕಿರಿ ಇದ್ದಲ್ಲಿ ಸಕ್ಕರೆ ಅಥವಾ ಜೇನುತುಪ್ಪದಲ್ಲಿ ಲವಂಗ ಪುಡಿಯನ್ನು ಬೆರೆಸಿ, ದಿನಕ್ಕೆ ಎರಡರಿಂದ ಮೂರುಬಾರಿ ಸೇವಿಸಬೇಕು

* ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಅಥವಾ ತುಪ್ಪವನ್ನು ಮೂಗಿನ ಎರಡೂ ಹೊಳ್ಳೆಗಳಿಗೆ ದಿನಕ್ಕೆ ಎರಡು ಬಾರಿ ಸವರಿಕೊಳ್ಳಬೇಕು

* ಒಂದು ಟೇಬಲ್ ಚಮಚ ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಎರಡು-ಮೂರು ನಿಮಿಷ ಬಾಯಿಯಲ್ಲಿಟ್ಟು ಉಗುಳಬೇಕು. ನಂತರ ಬಿಸಿನೀರಿನಿಂದ ಬಾಯಿ ಮುಕ್ಕಳಿಸಬೇಕು. ಈ ವಿಧಾನವನ್ನು ದಿನಕ್ಕೆ ಎರಡು ಬಾರಿ ಮಾಡಬೇಕು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT