ಶನಿವಾರ, ನವೆಂಬರ್ 28, 2020
25 °C

ಮಾಸ್ಕ್: ಗಾಯದ ಕಲೆ ಚಿಕಿತ್ಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ಪೀಡಿತರಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವ ಸಂದರ್ಭ ದಲ್ಲಿ ಬಳಸುವ ಎನ್‌ಐವಿ ಮಾಸ್ಕ್‌ಗಳಿಂದ ಮುಖದ ಮೇಲೆ ಗಾಯದ ಕಲೆಗಳು ಕಾಣಿಸಿಕೊಳ್ಳುತ್ತಿವೆ. ಅಂತಹವರಿಗೆ ಚಿಕಿತ್ಸೆ ಒದಗಿಸಲೆಂದೇ ನಗರದಲ್ಲಿ ಪ್ರತ್ಯೇಕ ಕ್ಲಿನಿಕ್‌ಗಳು ತಲೆಯೆತ್ತುತ್ತಿವೆ.

ಜಿವಿಜಿ ಇನ್ವಿವೊ ಆಸ್ಪತ್ರೆಯು ಕೋವಿಡ್‌ನಿಂದ ಚೇತರಿಸಿಕೊಂಡವರ ಮುಖದ ಮೇಲೆ ಕಾಣಿಸಿಕೊಳ್ಳುವ ಹುಣ್ಣು ಹಾಗೂ ಕಲೆಗಳಿಗೆ ಚಿಕಿತ್ಸೆ ನೀಡಲು ಸ್ಕಾರ್ ಕ್ಲಿನಿಕ್ ಪ್ರಾರಂಭಿಸಿದೆ. ಆಸ್ಪತ್ರೆಯಲ್ಲಿ 150ಕ್ಕೂ ಅಧಿಕ ಕೋವಿಡ್ ರೋಗಿಗಳು
ಚಿಕಿತ್ಸೆ ಪಡೆದುಕೊಂಡಿದ್ದಾರೆ. ಅವರಲ್ಲಿ 50ಕ್ಕೂ ಅಧಿಕ ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಆಸ್ಪತ್ರೆಯ ಮುಖ್ಯ ಪ್ಲಾಸ್ಟಿಕ್ ಸರ್ಜನ್ ಡಾ. ಗುಣಶೇಖರ್ ವುಪ್ಪಲಪತಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ಕೋವಿಡ್‌ ಚಿಕಿತ್ಸೆಯ ವೇಳೆ ಮುಖಗವಸನ್ನು ಸಡಿಲ ಮಾಡಿದಲ್ಲಿ ಆಮ್ಲಜನಕವು ಹೊರಗಡೆ ಹೋಗುವ ಸಾಧ್ಯತೆ ಇರುತ್ತದೆ. ಹಾಗಾಗಿ ಎನ್‌ಐವಿ ಮಾಸ್ಕ್‌ಗಳನ್ನು ವ್ಯಕ್ತಿಯ ಮುಖಕ್ಕೆ ಬಿಗಿಯಾಗಿ ಹಾಕಲಾಗುತ್ತದೆ’ ಎಂದರು.

‘ರಕ್ತದ ಹೆಪ್ಪುಗಟ್ಟುವಿಕೆಯಿಂದ ಚರ್ಮವು ಮುಖಗವಸು ಧರಿಸಿದ ಭಾಗದಲ್ಲಿ ಕಪ್ಪಾಗುತ್ತದೆ. ಕೆಲವರಲ್ಲಿ ಕಲೆಗಳು ಶಾಶ್ವತವಾಗಿ ಉಳಿಯುವ ಸಾಧ್ಯತೆ ಇರುತ್ತದೆ. ಹಾಗಾಗಿ ಅಂತಹವರಿಗೆ ಪ್ಲಾಸ್ಟಿಕ್ ಸರ್ಜರಿ, ಲೇಸರ್ ಚಿಕಿತ್ಸೆ ಸೇರಿದಂತೆ ವಿವಿಧ ವಿಧಾನಗಳ ಮೂಲಕ ಚಿಕಿತ್ಸೆಯನ್ನು ಒದಗಿಸಲು ನಿರ್ಧರಿಸಿದ್ದೇವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.