ನವದೆಹಲಿ: ಭಾರತದಲ್ಲಿ ಮೂರನೇ ಒಂದು ಭಾಗದಷ್ಟು ಪುರುಷರು ಮತ್ತು ಮಹಿಳೆಯರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಆದರೆ, ಪುರುಷರಿಗೆ ಹೋಲಿಸಿದರೆ ಹೆಚ್ಚಿನ ಮಹಿಳೆಯರು ಚಿಕಿತ್ಸೆ ಪಡೆಯುತ್ತಾರೆ ಎಂದು ದಿ ಲ್ಯಾನ್‌ಸೆಟ್‌ನಲ್ಲಿ ಪ್ರಕಟಿಸಿರುವ ಅಧ್ಯಯನ ವರದಿಯಿಂದ ತಿಳಿದು ಬಂದಿದೆ.

ಅಧ್ಯಯನದ ಪ್ರಕಾರ, ಒಟ್ಟು ಜನಸಂಖ್ಯೆಯ ಶೇ 30ರಷ್ಟು ಮಹಿಳೆಯರು ಮತ್ತು ಶೇ 32ರಷ್ಟು ಪುರುಷರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇದು ಹೃದಯ ಸಂಬಂಧಿತ ಕಾಯಿಲೆಗಳಿಗೆ ಕಾರಣವಾಗಬಹುದು. ಆದರೆ, ಶೇ 25ರಷ್ಟು ಪುರುಷರು, ಶೇ 35ರಷ್ಟು ಮಹಿಳೆಯರು ಅಧಿಕ ರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.

‘ಭಾರತದಲ್ಲಿ ಪುರುಷರು ಹೆಚ್ಚಿನ ವೈದ್ಯಕೀಯ ಸೇವೆಯನ್ನು ಪಡೆಯುತ್ತಾರೆ. ಆದರೆ, ರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆಯುತ್ತಿರುವ ಪುರುಷರು ಮತ್ತು ಮಹಿಳೆಯರ ನಡುವೆ ಶೇ 10ರಷ್ಟು ವ್ಯತ್ಯಾಸ ಕಂಡು ಬಂದಿದೆ’ ಎಂದು ಹೈದರಾಬಾದ್‌ನ ವಿಜ್ಞಾನಿ ಅವೂಲಾ ಲಕ್ಷ್ಮಯ್ಯ ಹೇಳಿದ್ದಾರೆ.

ಮೂರು ದಶಕಗಳಲ್ಲಿ 184 ದೇಶಗಳ 10 ಕೋಟಿಗೂ ಅಧಿಕ ಜನರ ರಕ್ತದೊತ್ತಡ ಪರೀಕ್ಷೆಯ ಫಲಿತಾಂಶಗಳನ್ನು ವಿಶ್ಲೇಷಿಸಲಾಗಿದೆ ಎಂದು ಅಧ್ಯಯನದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ... ಗರ್ಭಿಣಿಯರ ಬೆನ್ನುಮೂಳೆ ನೋವು ನಿವಾರಣೆಗೆ ಇಲ್ಲಿವೆ ಕೆಲವು ಟಿಪ್ಸ್!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.