ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಸಿಕೆ ಯಾರು ಪಡೆಯಬಹುದು, ಯಾರು ಪಡೆಯುವಂತಿಲ್ಲ? ಆರೋಗ್ಯ ಇಲಾಖೆ ಮಾರ್ಗಸೂಚಿ

Last Updated 15 ಜನವರಿ 2021, 5:42 IST
ಅಕ್ಷರ ಗಾತ್ರ

ನವದೆಹಲಿ: ಗರ್ಭಿಣಿಯರು ಹಾಗೂ ಹಾಲೂಡಿಸುವ ತಾಯಂದಿರಿಗೆ ಕೋವಿಡ್‌–19 ಲಸಿಕೆ ನೀಡಬಾರದು ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಗರ್ಭಿಣಿಯರು ಹಾಗೂ ಹಾಲೂಡಿಸುವ ತಾಯಂದಿರು ಕೋವಿಡ್‌–19 ಲಸಿಕೆಯ ಯಾವುದೇ ಟ್ರಯಲ್‌ನ ಭಾಗವಾಗಿರಲಿಲ್ಲ. ಈ ಕಾರಣಕ್ಕೆ ಅವರಿಗೆ ಲಸಿಕೆ ನೀಡಬಾರದು ಎಂದು ಸಚಿವಾಲಯ ಹೇಳಿದೆ.

ಈ ಸಂಬಂಧ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಮನೋಹರ್‌ ಅಗನಾನಿ ಅವರು ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿದ್ದಾರೆ.

ಕೆಲವು ನಿರ್ದಿಷ್ಟ ಔಷಧಿಗಳಿಗೆ ಅಲರ್ಜಿ ಅಥವಾ ಆರೋಗ್ಯ ಸಂಬಂಧಿ ಸಮಸ್ಯೆಗಳನ್ನು ಹೊಂದಿರುವವರಿಗೆ ಸಹ ಕೋವಿಡ್‌ ಲಸಿಕೆ ನೀಡಬಾರದು. ರಕ್ತಸ್ರಾವ ನಿಲ್ಲದಿರುವ ಅಥವಾ ರಕ್ತ ಹೆಪ್ಪುಗಟ್ಟುದಿರುವ ತೊಂದರೆ ಇರುವವರಿಗೆ ಈ ಲಸಿಕೆ ನೀಡಬಾರದು ಎಂದೂ ಅವರು ತಿಳಿಸಿದ್ದಾರೆ.

ಯಾವ ಯಾವ ಸಂದರ್ಭಗಳಲ್ಲಿ ಲಸಿಕೆಯನ್ನು ನೀಡಬಾರದು ಎಂಬ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಈ ಮಾಹಿತಿಯನ್ನು ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಿಗೆ ನೀಡುವಂತೆಯೂ ಸೂಚಿಸಿದ್ದಾರೆ.

ಒಬ್ಬ ವ್ಯಕ್ತಿಗೆ ಮೊದಲ ಡೋಸ್‌ನಲ್ಲಿ ನೀಡಿರುವ ಲಸಿಕೆಯನ್ನೇ ಎರಡನೇ ಡೋಸ್‌ನಲ್ಲೂ ನೀಡಬೇಕು. ಯಾವುದೇ ಕಾರಣಕ್ಕೂ ಲಸಿಕೆಯನ್ನು ಬದಲಾಯಿಸಬಾರದು ಎಂದು ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಸಾರ್ಸ್‌–ಕೋವ್‌–2 ವೈರಸ್‌ ಸೋಂಕಿನ ಲಕ್ಷಣಗಳನ್ನು ಹೊಂದಿರುವವರಿಗೆ ಅಥವಾ ಸೋಂಕಿತರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿದ್ದರೆ ಅಂಥವರು ಸೋಂಕಿನಿಂದ ಗುಣಮುಖರಾದ 4–8 ವಾರಗಳ ನಂತರ ಲಸಿಕೆ ನೀಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT