ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾನಸಿಕ ಸಮಸ್ಯೆ, ಒತ್ತಡ ನಿವಾರಣೆ: ಉಚಿತ ಸಲಹೆ

Published 20 ಏಪ್ರಿಲ್ 2024, 14:09 IST
Last Updated 20 ಏಪ್ರಿಲ್ 2024, 14:09 IST
ಅಕ್ಷರ ಗಾತ್ರ

ಬೆಂಗಳೂರು: ಮಾನಸಿಕ ಸಮಸ್ಯೆ ಹಾಗೂ ಒತ್ತಡಕ್ಕೆ ಒಳಗಾದವರು ಉಚಿತವಾಗಿ ‘ಟೆಲಿ ಮನಸ್’ ಸಹಾಯವಾಣಿ ಮೂಲಕ ಸಲಹೆ ಪಡೆಯಬಹುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ಏಪ್ರಿಲ್ ಅನ್ನು ಒತ್ತಡ ನಿವಾರಣೆ ಜಾಗೃತಿ ತಿಂಗಳಾಗಿ ಆಚರಿಸಲಾಗುತ್ತಿದೆ. ಯಾವುದೇ ಸಮಯ, ಸಂದರ್ಭದಲ್ಲಿ ವ್ಯಕ್ತಿಯು ಒತ್ತಡಕ್ಕೆ ಒಳಗಾಗಬಹುದು. ಒತ್ತಡವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಬಗ್ಗೆ ಜಾಗೃತಿ ಮೂಡಬೇಕಿದೆ. ‘ಟೆಲಿ ಮನಸ್’ ಮೂಲಕ 20 ಭಾಷೆಗಳಲ್ಲಿ ಸೇವೆ ಒದಗಿಸಲಾಗುತ್ತಿದೆ’ ಎಂದು ಇಲಾಖೆ ಹೇಳಿದೆ.

‘ವ್ಯಥೆ, ಕೌಟುಂಬಿಕ ಸಮಸ್ಯೆ, ಶೈಕ್ಷಣಿಕ ಒತ್ತಡಕ್ಕೆ ಒಳಗಾದವರು, ಆತ್ಮಹತ್ಯೆಯ ಚಿಂತನೆ, ಮಾದಕ ವಸ್ತುಗಳ ಸೇವನೆಯ ವ್ಯಸನ, ಜ್ಞಾಪಕ ಶಕ್ತಿ ಸಮಸ್ಯೆ, ಆರ್ಥಿಕ ಒತ್ತಡ ಸೇರಿ ಇತರೆ ಮಾನಸಿಕ ಸಮಸ್ಯೆ ಎದುರಿಸುತ್ತಿರುವವರೂ ಶುಲ್ಕರಹಿತ ದೂರವಾಣಿ ಸಂಖ್ಯೆಗೆ ಕರೆ ಮಾಡಿ ಸಲಹೆ ಪಡೆಯಬಹುದು’ ಎಂದು ತಿಳಿಸಿದೆ. ಟೆಲಿ ಮನಸ್ ಸಹಾಯವಾಣಿ ಸಂಖ್ಯೆ: 14416.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT