ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹ್ಯಾಂಡ್‌ ಸ್ಯಾನಿಟೈಸರ್‌ ಹೆಚ್ಚಾಗಿ ಬಳಸಬೇಡಿ: ಆರೋಗ್ಯ ಇಲಾಖೆ ಅಧಿಕಾರಿ ಸಲಹೆ

Last Updated 25 ಜುಲೈ 2020, 14:35 IST
ಅಕ್ಷರ ಗಾತ್ರ

ದೆಹಲಿ: ಕೈಗಳನ್ನು ಆಗಾಗ್ಗೆ ತೊಳೆಯುತ್ತಿರಿ ಎಂದು ಸಲಹೆ ನೀಡಿರುವ ಕೇಂದ್ರದ ಆರೋಗ್ಯ ಸಚಿವಾಲಯದ ಹೆಚ್ಚುವರಿ ಮಹಾನಿರ್ದೇಶಕ ಡಾ. ಆರ್‌.ಕೆ ವರ್ಮಾ, ಸ್ಯಾನಿಟೈಸರ್‌ಗಳನ್ನು ಹೆಚ್ಚಾಗಿ ಬಳಸದಂತೆ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡಿರುವ ಅವರು, ‘ ಇದೊಂದು ಸಂದಿಗ್ಧ ಸಮಯ. ಇಂಥ ವೈರಸ್‌ವೊಂದು ದಾಳಿ ಮಾಡುತ್ತದೆ ಎಂದು ಯಾರೂ ಭಾವಿಸಿರಲಿಲ್ಲ. ಹಾಗಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ಗಳನ್ನು ಧರಿಸಿರಿ. ನಿಮ್ಮನ್ನು ನೀವು ರಕ್ಷಿಸಿಕೊಳ್ಳಿ. ಬಿಸಿ ನೀರು ಹೆಚ್ಚಾಗಿ ಕುಡಿಯಿರಿ. ಕೈಗಳನ್ನು ತಪ್ಪದೇ ತೊಳೆದುಕೊಳ್ಳುತ್ತಿರಿ. ಆದರೆ, ಸ್ಯಾನಿಟೈಸರ್‌ಗಳನ್ನು ಹೆಚ್ಚಾಗಿ ಬಳಸಬೇಡಿ,’ ಎಂದು ಅವರು ಸಲಹೆ ನೀಡಿದ್ದಾರೆ.

ಹ್ಯಾಂಡ್ ಸ್ಯಾನಿಟೈಸರ್‌ಗಳ ಅತಿಯಾದ ಬಳಕೆಯಿಂದ ಚರ್ಮಕ್ಕೆ ಅಗತ್ಯವಾದ ಬ್ಯಾಕ್ಟೀರಿಯಾಗಳು ನಾಶವಾಗುವ ಸಾಧ್ಯತೆಗಳಿರುತ್ತವೆ. ಇದು ಮತ್ತೊಂದು ರೀತಿಯ ಆರೋಗ್ಯದ ಸಮಸ್ಯೆಗೆ ಕಾರಣವಾಗಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ನಿಮ್ಮ ಬಳಿ ಸೋಪು, ನೀರು ಇದ್ದಾಗ ಸ್ಯಾನಿಟೈಸರ್‌ಗಳನ್ನು ಬಳಸುವ ಅಗತ್ಯವಿಲ್ಲ ಎಂದೂ ಹಲವು ತಜ್ಞರು ಹೇಳಿದ್ದಾರೆ. ಹೀಗಾಗಿ ಆರ್‌ಕೆ ವರ್ಮಾ ಅವರ ಸಲಹೆ ಪ್ರಾಧಾನ್ಯತೆ ಪಡೆದುಕೊಂಡಿದೆ.

ಸದ್ಯ ದೇಶದಲ್ಲಿ 13,36,861 ಮಂದಿ ಸೋಂಕಿತರಿದ್ದು, 31,358 ಮಂದಿ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT