ಗದಗ: ‘ಸರ್ಕಾರಿ ನೌಕರರು ಆರೋಗ್ಯದಿಂದ ಇದ್ದರೆ ಕುಟುಂಬ ಸುಭಿಕ್ಷೆಯಿಂದ ಇರಲು ಸಾಧ್ಯ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಗದಗ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಳ್ಳಾರಿ ಹೇಳಿದರು.

ನಗರದ ಸರ್ಕಾರಿ ನೌಕರರ ಸಭಾಭವನದಲ್ಲಿ ಮಣಿಪಾಲ್ ಆಸ್ಪತ್ರೆಯ ವೈದ್ಯರಿಂದ ಹೃದಯದ ಸಮಗ್ರ ಆರೈಕೆ ಮತ್ತು ಚಿಕಿತ್ಸೆ ಕುರಿತು ಗುರುವಾರ ನಡೆದ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಮಣಿಪಾಲ್ ಆಸ್ಪತ್ರೆ ಹೃದಯ ರೋಗಕ್ಕೆ ವಿಶೇಷ ಚಿಕಿತ್ಸೆ ನೀಡುವ ಮೂಲಕ ಹೆಸರುವಾಸಿಯಾಗಿದೆ. ಇಲ್ಲಿನ ತಜ್ಞ ವೈದ್ಯರು ನಗರಕ್ಕೆ ಬಂದು ಹೃದಯ ರೋಗದ ಕುರಿತು ಸಂವಾದ ನಡೆಸುತ್ತಿರುವುದು ಶ್ಲಾಘನೀಯ’ ಎಂದರು.

‘ಪ್ರತಿಯೊಬ್ಬರೂ ನಿಯಮಿತ ದೈಹಿಕ ವ್ಯಾಯಾಮ, ಸಮತೋಲಿತ ಆಹಾರ, ಧೂಮಪಾನ ತ್ಯಜಿಸುವುದು, ಒತ್ತಡ ನಿರ್ವಹಣೆ ಹಾಗೂ ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದರಿಂದ ಹೃದಯ ಆರೋಗ್ಯ ಕಾಪಾಡಿಕೊಳ್ಳಬಹುದು’ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮೇರಿ ದೇವಾಸಿಯಾ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ ರವಿ ಎಲ್. ಗುಂಜೀಕರ, ‘ಸರ್ಕಾರಿ ನೌಕರರ ಸಂಘ ಕೇವಲ ನೌಕರರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ನೌಕರರ ಕುಟುಂಬ ಹಾಗೂ ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ’ ಎಂದರು.

‘ಸರ್ಕಾರಿ ನೌಕರರು ಸುಭಿಕ್ಷೆಯಾಗಿ ಕೆಲಸ ಮಾಡಬೇಕು ಎಂದರೇ ಮೊದಲು ಆರೋಗ್ಯವಂತರಾಗಿರಬೇಕು. ಅಂದಾಗ ಒಳ್ಳೆಯ ಆಡಳಿತ ನೀಡಲು ಸಾಧ್ಯವಾಗುತ್ತದೆ. ರಾಜ್ಯದಲ್ಲಿರುವ ಎಲ್ಲ ನೌಕರರಿಗೂ ಒಳ್ಳೆಯ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಈ ಸಂವಾದ ಏರ್ಪಡಿಸಲಾಗಿದ್ದು, ಎಲ್ಲ ನೌಕರರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಡಿ.ಎಸ್.ತಳವಾರ, ಕಾರ್ಯಾಧ್ಯಕ್ಷ ಸಿದ್ದಪ್ಪ ಲಿಂಗದಾಳ, ಖಜಾಂಚಿ ಎಂ.ಎಂ. ನಿಟ್ಟಾಲಿ, ಪ್ರಧಾನ ಕಾರ್ಯದರ್ಶಿ ಮುತ್ತು ಮಲಕಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಶ್ರೀಧರ ಚಿನಗುಂಡಿ, ರಾಜು ಕಂಟೆಗಣ್ಣವರ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯಶ್ರೀ ಶ್ರೀಗಿರಿ, ಮಾಜಿ ಅಧ್ಯಕ್ಷ ಪ್ರೇಮನಾಥ ಗರಗ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-23-480730402

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.