ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ನಾಟಕ ಕುಸ್ತಿ ತಂಡದ ಆಯ್ಕೆ ಟ್ರಯಲ್ಸ್‌ ಇಂದು

Last Updated 29 ಮೇ 2018, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಉತ್ತರ ಪ್ರದೇಶದ ಮೀರಟ್‌ನಲ್ಲಿ ಜೂನ್‌ 15ರಿಂದ ಮೂರು ದಿನ ನಡೆಯಲಿರುವ ಬಾಲಕ ಮತ್ತು ಬಾಲಕಿಯರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ಗೆ ಕರ್ನಾಟಕ ತಂಡವನ್ನು ಆಯ್ಕೆ ಮಾಡಲು ಬುಧವಾರ (ಮೇ 30) ಬೆಳಿಗ್ಗೆ 8.30ಕ್ಕೆ ಬೆಳಗಾವಿಯ ಕ್ರೀಡಾ ವಸತಿ ನಿಲಯದಲ್ಲಿ ಆಯ್ಕೆ ಟ್ರಯಲ್ಸ್‌ ನಡೆಯಲಿದೆ.

ಬಾಲಕರ ಫ್ರೀಸ್ಟೈಲ್‌ ವಿಭಾಗದಲ್ಲಿ 38, 41, 44, 48, 52, 57, 62, 68, 75 ಮತ್ತು 25 ಕೆ.ಜಿ. ಗ್ರೀಕೊ ರೋಮನ್‌ನಲ್ಲಿ 38, 41, 44, 48, 52, 57, 62, 68, 75 ಮತ್ತು 85 ಕೆ.ಜಿ. ವಿಭಾಗದಲ್ಲಿ ಸ್ಪರ್ಧೆಗಳು ಜರುಗಲಿವೆ. ಬಾಲಕಿಯರ ವಿಭಾಗಕ್ಕೆ 33, 36, 39, 42, 46, 50, 54, 58, 62 ಮತ್ತು 66 ಕೆ.ಜಿ. ವಿಭಾಗಗಳಿಗೆ ಟ್ರಯಲ್ಸ್‌ ನಡೆಯಲಿವೆ.

15 ವರ್ಷದ ಒಳಗಿನ ಕುಸ್ತಿಪಟುಗಳು ಸೂಕ್ತ ದಾಖಲೆಗಳೊಂದಿಗೆ ಟ್ರಯಲ್ಸ್‌ನಲ್ಲಿ ಭಾಗವಹಿಸಬೇಕು ಎಂದು ಕರ್ನಾಟಕ ಕುಸ್ತಿ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ. ಇನ್ನಷ್ಟು ಮಾಹಿತಿಗಾಗಿ ನಾಗರಾಜ ಬೆಳಗಾವಿ ಅವರ ದೂರವಾಣಿ 9481966245 ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT