ನಿಫಾ ವೈರಸ್‌: ಬಿಬಿಎಂಪಿಯಿಂದ ಸಹಾಯವಾಣಿ

ಶುಕ್ರವಾರ, ಜೂನ್ 21, 2019
24 °C

ನಿಫಾ ವೈರಸ್‌: ಬಿಬಿಎಂಪಿಯಿಂದ ಸಹಾಯವಾಣಿ

Published:
Updated:

ಬೆಂಗಳೂರು: ಕೇರಳದಲ್ಲಿ ಹರಡುತ್ತಿರುವ ನಿಫಾ ವೈರಸ್‌ ಬೆಂಗಳೂರಿನಲ್ಲೂ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಬಿಬಿಎಂಪಿಯಿಂದ ಸಹಾಯವಾಣಿ ಮತ್ತು ಸಮಾಲೋಚನಾ ಕಿಯೊಸ್ಕ್‌ಗಳನ್ನು ತೆರೆಯಲು ಪಾಲಿಕೆಯ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೇಯರ್ ಗಂಗಾಂಬಿಕೆ ತಿಳಿಸಿದರು.

‘ನಿಫಾ ವೈರಸ್ ರಾಜ್ಯದಲ್ಲಿ ಕಾಣಿಸಿಕೊಂಡಿಲ್ಲ. ಆದರೂ ಮುನ್ನೆಚ್ಚರಿಕೆ ವಹಿಸಲಾಗುತ್ತಿದ್ದು, ಜನರು ಭಯಪಡಬೇಕಿಲ್ಲ. ಈ ಸೋಂಕಿನ ಲಕ್ಷಣಗಳ ಕುರಿತು ಕರಪತ್ರ ಹಂಚಿಕೆ ಮತ್ತು ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ’ ಎಂದರು.

‘ಸಹಾಯವಾಣಿ ಮತ್ತು ಕಿಯೊಸ್ಕ್‌ಗಳನ್ನು ಬಿಬಿಎಂಪಿಯ 85 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 24 ಹೆರಿಗೆ ಆಸ್ಪತ್ರೆಗಳು ಮತ್ತು 6 ರೆಫರಲ್ ಆಸ್ಪತ್ರೆಗಳಲ್ಲಿ ತೆರೆಯಲಾಗಿದೆ. ಸಹಾಯವಾಣಿ ಸಂಖ್ಯೆ 080-22660000, 22221188ಗೆ ಸಾರ್ವಜನಿಕರು ಕರೆ ಮಾಡಬಹುದು’ ಎಂದು ಹೇಳಿದರು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !