ಪ್ರಮಾಣ ಪತ್ರ ಸಲ್ಲಿಸಲು ಆದೇಶ

ಭಾನುವಾರ, ಜೂನ್ 16, 2019
22 °C
ಬೀದಿ ಬದಿ ವ್ಯಾಪಾರಿಗಳ ಕಾಯ್ದೆಗೆ ನಿಯಮ ರೂಪಿಸಲು ವಿಳಂಬ- ಆಕ್ಷೇಪ

ಪ್ರಮಾಣ ಪತ್ರ ಸಲ್ಲಿಸಲು ಆದೇಶ

Published:
Updated:

ಬೆಂಗಳೂರು: ‘ಬೀದಿ ಬದಿ ವ್ಯಾಪಾರಿಗಳ ಕಾಯ್ದೆ–2014ಕ್ಕೆ (ಉಪಜೀವನ ಸಂರಕ್ಷಣೆ ಹಾಗೂ ನಿಯಂತ್ರಣ) ರಾಜ್ಯ ಸರ್ಕಾರ ಇನ್ನೂ ಏಕೆ ನಿಯಮಗಳನ್ನು ರೂಪಿಸಿಲ್ಲ ಎಂಬುದರ ಬಗ್ಗೆ ಮೂರು ವಾರಗಳಲ್ಲಿ ಪ್ರಮಾಣ ಪತ್ರ ಸಲ್ಲಿಸಿ’ ಎಂದು ರಾ‌ಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಹೈಕೋರ್ಟ್ ಆದೇಶಿಸಿದೆ.

ಈ ಕುರಿತ ಮೂರು ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ಹಾಗೂ ಎಚ್‌.ಟಿ.ನರೇಂದ್ರ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ ಮಧ್ಯಂತರ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ‘ನಾಲ್ಕು ವರ್ಷ ಕಳೆದರೂ ಇನ್ನೂ ಏಕೆ ನಿಯಮ ರೂಪಿಸಿಲ್ಲ’ ಎಂದು ರಾಜ್ಯ ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿತು.

‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅಂಗಡಿಗಳ ಮುಂಗಟ್ಟು ವಿಸ್ತರಣೆ ಸಂಬಂಧ ಕೈಗೊಂಡಿರುವ ಕ್ರಮಗಳ ಬಗ್ಗೆ ಮೂರು ವಾರಗಳಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸಬೇಕು’ ಎಂದೂ ಬಿಬಿಎಂಪಿ ಪರ ವಕೀಲರಿಗೆ ನಿರ್ದೇಶಿಸಿತು.

ಆಕ್ಷೇಪಣೆ ಏನು: ‘ಶಿವಾಜಿ ನಗರ ಮತ್ತು ಮಡಿವಾಳ ಪ್ರದೇಶದಲ್ಲಿ ಬೀದಿ ಬದಿ ವ್ಯಾಪಾರಿಗಳ ನಿಯಂತ್ರಣ ಮಾಡಬೇಕು ಮತ್ತು ಬೀದಿ ಬದಿ ವ್ಯಾಪಾರಿಗಳ ಕಾಯ್ದೆಗೆ ಸಂಬಂಧಿಸಿದಂತೆ ಈತನಕ ನಿಯಮ ರೂಪಿಸಿಲ್ಲ‘ ಎಂಬುದು ಅರ್ಜಿದಾರರ ಆಕ್ಷೇಪ.

‘ಅಂಗಡಿಗಳು, ಬೀದಿ ಬದಿ ವ್ಯಾಪಾರಿಗಳು ಹಾಗೂ ಹೋಟೆಲ್‌ ಮಾಲೀಕರು ಪಾದಚಾರಿ ಮಾರ್ಗ ಅತಿಕ್ರಮಿಸಿದ್ದಾರೆ. ಕೇಂದ್ರದ ಕಾಯ್ದೆಗೆ ಅನುಗುಣವಾಗಿ ಸೂಕ್ತ ನಿಯಮ ರೂಪಿಸಿ ಕಾಯ್ದೆಯನ್ನು ಜಾರಿಗೊಳಿಸುವ ಹೊಣೆ ಆಯಾ ರಾಜ್ಯ ಸರ್ಕಾರಗಳದ್ದು. ಆದರೆ, ರಾಜ್ಯ ಸರ್ಕಾರ ಈ ನಿಯಮ ರೂಪಿಸುವಲ್ಲಿ ಕಾರ್ಯೋನ್ಮುಖವಾಗಿಲ್ಲ’ ಎಂದು ಅರ್ಜಿದಾರರು ದೂರಿದ್ದಾರೆ.

ಬೀದಿ ಬದಿ ವ್ಯಾಪಾರಿಗಳ ಸಾಮಾಜಿಕ ಸುರಕ್ಷೆ, ಹಿತರಕ್ಷಣೆ ಹಾಗೂ ಅವರ ದಿನನಿತ್ಯದ ವ್ಯಾಪಾರ–ವಹಿವಾಟು ಸುಗಮವಾಗಿ ನಡೆಯಲು ಅನುಕೂಲವಾಗುವ ದಿಸೆಯಲ್ಲಿ ಕೇಂದ್ರ ಸರ್ಕಾರ 2014ರಲ್ಲಿ ಬೀದಿ ವ್ಯಾಪಾರಿಗಳ ಕಾಯ್ದೆಯನ್ನು (ಉಪಜೀವನ ಸಂರಕ್ಷಣೆ ಹಾಗೂ ನಿಯಂತ್ರಣ) ರೂಪಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !