ಜಿಲ್ಲಾಧಿಕಾರಿ ವಿರುದ್ಧದ ನ್ಯಾಯಾಂಗ ನಿಂದನೆ ಕೈಬಿಟ್ಟ ಹೈಕೋರ್ಟ್

7

ಜಿಲ್ಲಾಧಿಕಾರಿ ವಿರುದ್ಧದ ನ್ಯಾಯಾಂಗ ನಿಂದನೆ ಕೈಬಿಟ್ಟ ಹೈಕೋರ್ಟ್

Published:
Updated:

ಬೆಂಗಳೂರು: ಸ್ಮಶಾನ ಬಳಕೆಯ ಉದ್ದೇಶಕ್ಕೆ ವಶಪಡಿಸಿಕೊಂಡ ಜಮೀನಿಗೆ ಪರ್ಯಾಯ ಜಮೀನು ಮಂಜೂರು ಮಾಡದ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪವನ್ನು ಹೈಕೋರ್ಟ್ ಕೈಬಿಟ್ಟಿದೆ.

ಈ ಕುರಿತಂತೆ ಯಲಹಂಕದ ಸಿಂಗಾಪುರ ಗ್ರಾಮದ ಯೋಗೇಶ್ವರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಆರ್‌.ಎಸ್‌. ಚೌಹಾಣ್ ಹಾಗೂ ನ್ಯಾಯಮೂರ್ತಿ ಬಿ.ಎಂ.ಶ್ಯಾಮ್ ಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಲೇವಾರಿ ಮಾಡಿದೆ.

ವಿಚಾರಣೆ ವೇಳೆ ನ್ಯಾಯಪೀಠಕ್ಕೆ ಜ್ಞಾಪನಾ ಪತ್ರ ಸಲ್ಲಿಸಿದ ಸರ್ಕಾರಿ ವಕೀಲರು, ‘ಅರ್ಜಿದಾರರಿಂದ ವಶ ಪಡಿಸಿಕೊಂಡಿದ್ದ 24 ಗುಂಟೆ ಜಮೀನಿಗೆ ಪ್ರತಿಯಾಗಿ, ಯಲಹಂಕ ತಾಲ್ಲೂಕಿನ ಚಿಕ್ಕಜಾಲ ಗ್ರಾಮದ ಸರ್ವೇ ಸಂಖ್ಯೆ 76ರಲ್ಲಿ 25 ಗುಂಟೆ ಜಮೀನು ಮಂಜೂರು ಮಾಡಲಾಗಿದೆ’ ಎಂದು ವಿವರಿಸಿದರು.

ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ‘ಎರಡು ವಾರದೊಳಗೆ ಪರ್ಯಾಯ ಜಮೀನನ್ನು ಅರ್ಜಿದಾರರ ಸ್ವಾಧೀನಕ್ಕೆ ನೀಡಬೇಕು ಎಂದು ಆದೇಶಿಸಿತು. ಜಿಲ್ಲಾಧಿಕಾರಿ ವಿರುದ್ಧದ ನ್ಯಾಯಾಂಗ ನಿಂದನೆ ಆರೋಪ ಕೈಬಿಟ್ಟಿತು.

‘ಹೈಕೋರ್ಟ್ ಆದೇಶದ ಇದ್ದರೂ ನನಗೆ ಪರ್ಯಾಯ ಜಮೀನು ಮಂಜೂರು ಮಾಡಲು ಸರ್ಕಾರ ವಿಳಂಬ ಮಾಡುತ್ತಿದೆ’ ಎಂದು ದೂರಿ ಈ ಅರ್ಜಿ ಸಲ್ಲಿಸಲಾಗಿತ್ತು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !