7

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ: ಅರ್ಜಿ ವಜಾ

Published:
Updated:

ಬೆಂಗಳೂರು: ‘ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 25 ಎಕರೆ ಗೋಮಾಳ ಜಮೀನು ನೀಡಿರುವುದು ತಪ್ಪು’ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

‘ಶ್ರೀನಿವಾಸಪುರ ತಾಲ್ಲೂಕಿನ ರೋಣೂರು ಹೋಬಳಿಯ ಸರ್ವೇ ನಂ 131ರಲ್ಲಿ 25 ಎಕರೆ ಜಮೀನನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸಲು ಆರೋಗ್ಯ ಇಲಾಖೆಗೆ ನೀಡಲಾಗಿದೆ. ಕಂದಾಯ ಇಲಾಖೆಯ ಈ ಕ್ರಮ ಕಾನೂನು ಬಾಹಿರ’ ಎಂದು ಆಕ್ಷೇಪಿಸಿ ರೋಣೂರು ಹೋಬಳಿಯ ಟಿ.ವಿ.ನಾರಾಯಣ ಸ್ವಾಮಿ ಹಾಗೂ ಟಿ.ಆರ್.ನಾರಾಯಣ ಸ್ವಾಮಿ ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಜಾ ಮಾಡಿದೆ.

 

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !