ಮೊಗೇರರಿಗೆ ಎಸ್‌.ಸಿ ಪ್ರಮಾಣ ಪತ್ರ: ಸರ್ಕಾರಕ್ಕೆ ನೋಟಿಸ್‌

ಸೋಮವಾರ, ಮಾರ್ಚ್ 18, 2019
31 °C

ಮೊಗೇರರಿಗೆ ಎಸ್‌.ಸಿ ಪ್ರಮಾಣ ಪತ್ರ: ಸರ್ಕಾರಕ್ಕೆ ನೋಟಿಸ್‌

Published:
Updated:

ಬೆಂಗಳೂರು: ‘ಮೊಗೇರ ಸಮುದಾಯದವರಿಗೆ ಪರಿಶಿಷ್ಟ ಜಾತಿ (ಎಸ್‌.ಸಿ) ಪ್ರಮಾಣಪತ್ರ ನೀಡಿಕೆ ಕುರಿತ ಆದೇಶವನ್ನು ರದ್ದುಪಡಿಸಬೇಕು’ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಉತ್ತರ ಕನ್ನಡ ಜಿಲ್ಲಾ ಮೊಗೇರ ಸಂಘದ ಕಾರ‍್ಯದರ್ಶಿ ಅಶೋಕ್ ಭಟ್ಕಳ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಶಿರಸಿ ತಾಲ್ಲೂಕು ತಹಶೀಲ್ದಾರ್‌ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಲು ಆದೇಶಿಸಿರುವ ನ್ಯಾಯಪೀಠ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿದೆ.

ಆಕ್ಷೇಪಣೆ ಏನು?: ‘ರಾಜ್ಯ ಸರ್ಕಾರ ಕೋರ್ಟ್ ತೀರ್ಪುಗಳಿಗೆ ವ್ಯತಿರಿಕ್ತವಾಗಿ 2018ರ ಮೇ 31ರಂದು ಆದೇಶ ಹೊರಡಿಸಿದೆ’ ಎಂಬುದು ಅರ್ಜಿದಾರರ ಆಕ್ಷೇಪ.

‘ಮೊಗೇರ ಜನಾಂಗವನ್ನು 1950ರಲ್ಲಿಯೇ ಎಸ್.ಸಿ ಪಟ್ಟಿಯಲ್ಲಿ ಸೇರಿಸಿ ರಾಷ್ಟ್ರಪತಿಗಳು ಆದೇಶ ಹೊರಡಿಸಿದ್ದಾರೆ. ಆದರೆ, ಪ್ರಮಾಣ ಪತ್ರ ನೀಡುವ ಕುರಿತಂತೆ ಗೊಂದಲ ಸೃಷ್ಟಿಯಾಗಿತ್ತು. ಇದನ್ನು ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ನಿವಾರಿಸಿವೆ’ ಎಂಬುದು ಅರ್ಜಿದಾರರ ವಿವರಣೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !