ಅಧ್ಯಕ್ಷರ ಅಧಿಕಾರಾವಧಿ: ಕಾಯ್ದಿರಿಸಿದ ಆದೇಶ

ಶುಕ್ರವಾರ, ಏಪ್ರಿಲ್ 26, 2019
24 °C

ಅಧ್ಯಕ್ಷರ ಅಧಿಕಾರಾವಧಿ: ಕಾಯ್ದಿರಿಸಿದ ಆದೇಶ

Published:
Updated:

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರ ಅಧಿಕಾರದ ಅವಧಿಯನ್ನು ಮೂರು ವರ್ಷದಿಂದ 5 ವರ್ಷಗಳಿಗೆ ವಿಸ್ತರಿಸುವ ನಿರ್ಣಯ ಪ್ರಶ್ನಿಸಿದ ಅರ್ಜಿಯ ಮೇಲಿನ ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ.

ಈ ಕುರಿತಂತೆ ಕನ್ನಡ ಸಂಘರ್ಷ ಸಮಿತಿ ಅಧ್ಯಕ್ಷ ಕೊ.ವೆಂ.ರಾಮಕೃಷ್ಣೇಗೌಡ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗೆ ಸಂಬಂಧಿಸಿದ ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಅಲೋಕ್ ಅರಾಧೆ ಅವರಿದ್ದ ಏಕಸದಸ್ಯ ನ್ಯಾಯಪೀಠವು ಸೋಮವಾರದಂದು ವಿಚಾರಣೆಯನ್ನು ಪೂರ್ಣಗೊಳಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಸಾಹಿತ್ಯ ಪರಿಷತ್‌ ಗೌರವ ಕಾರ್ಯದರ್ಶಿ ವಿ.ಸಿ.ಚನ್ನೇಗೌಡ ಸೇರಿದಂತೆ ಒಟ್ಟು ಆರು ಜನರನ್ನು ಪ್ರಕರಣದಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಅಶೋಕ ಹಾರನಹಳ್ಳಿ ವಾದ ಮಂಡಿಸಿದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !