ಶುಕ್ರವಾರ, ಮೇ 29, 2020
27 °C

‘ಯಥಾಸ್ಥಿತಿ ಮುಂದುವರಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹದೇವಪುರ ವಲಯದ ತೂಬರಹಳ್ಳಿ ಹಾಗೂ ಕುಂದಲಹಳ್ಳಿ ಬಳಿ ವಾಸಿಸುತ್ತಿರುವ ವಲಸೆ ಕಾರ್ಮಿಕರ ಜೋಪಡಿಗಳನ್ನು ತೆರವುಗೊಳಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಯ್ದುಕೊಂಡು ಹೋಗಲು ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್‌ ಮುಂದುವರಿಸಿದೆ.

ಈ ಕುರಿತಂತೆ ಮುರ್ಷೀದಾಬಾದ್‌ನಿಂದ ವಲಸೆ ಬಂದು ಇಲ್ಲಿ ನೆಲೆಸಿರುವ ರೇಖಾ ಬೀಬಿ ಸೇರಿದಂತೆ ಪಶ್ಚಿಮ ಬಂಗಾಳ ಹಾಗೂ ಒಡಿಶಾದ 66 ಜನರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಸುನಿಲ್‌ ದತ್‌ ಯಾದವ್‌ ಸೋಮವಾರ ವಿಚಾರಣೆ ನಡೆಸಿದರು.

ಪ್ರಕರಣದಲ್ಲಿ ಜಿಲ್ಲಾಧಿಕಾರಿ ಹಾಗೂ ಭೂ ಮಾಲೀಕರನ್ನು ಪ್ರತಿವಾದಿಯನ್ನಾಗಿ ಮಾಡಬೇಕೆಂದು ಸೂಚಿಸಿದ ನ್ಯಾಯಪೀಠ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿಗೆ ಆದೇಶಿಸಿತು.

ಪ್ರಕರಣವೇನು?: ‘ಕುಂದಲಹಳ್ಳಿ ಗೇಟ್‌, ತೂಬರಹಳ್ಳಿ, ವೈಟ್‌ಫೀಲ್ಡ್‌ ಪ್ರದೇಶದ ಖಾಸಗಿ ಜಮೀನಿನಲ್ಲಿ ದೇಶದ ವಿವಿಧೆಡೆಯಿಂದ ಬಂದಿರುವ 5 ಸಾವಿರಕ್ಕೂ ಹೆಚ್ಚು ಜನರನ್ನು ಬಿಬಿಎಂಪಿ ಅಧಿಕಾರಿಗಳು ಒಕ್ಕಲೆಬ್ಬಿಸಲು ಮುಂದಾಗಿದ್ದು ಇದನ್ನು ಜೋಪಡಿ ನಿವಾಸಿಗಳು ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು