ಹೆದ್ದಾರಿ ವಿಸ್ತರಣೆ: ಸಹಾಯಕ ಆಯುಕ್ತರಿಗೆ ನೋಟಿಸ್‌

7
ಸುರೇಶ್‌ ಹೆಬ್ಳೀಕರ್ ಪಿಐಎಲ್‌: ಕೇಂದ್ರ, ರಾಜ್ಯಕ್ಕೆ ಹೈಕೋರ್ಟ್‌ ನೋಟಿಸ್‌

ಹೆದ್ದಾರಿ ವಿಸ್ತರಣೆ: ಸಹಾಯಕ ಆಯುಕ್ತರಿಗೆ ನೋಟಿಸ್‌

Published:
Updated:

ಬೆಂಗಳೂರು: ದಾಂಡೇಲಿ ಅರಣ್ಯದ ಮೂಲಕ ಹಾದು ಹೋಗುವ ಬೆಳಗಾವಿ-ಗೋವಾ ನಡುವಿನ ರಾಷ್ಟ್ರೀಯ ಹೆದ್ದಾರಿ– 4ಎ ವಿಸ್ತರಣೆ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ (ಪಿಐಎಲ್‌) ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರ ಹಾಗೂ ಭಾರತೀಯ ರಾಷ್ಟ್ರಿಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಸಹಾಯಕ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಪರಿಸರವಾದಿ ಸುರೇಶ್ ಹೆಬ್ಳೀಕರ್, ಹಿರಿಯ ಪತ್ರಕರ್ತ ಜೋಸೆಫ್ ಹೂವರ್ ಮತ್ತು ಜೆ.ಮಂಜುನಾಥ್‌ ಸಲ್ಲಿಸಿರುವ ಪಿಐಎಲ್‌ ಅನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್. ನಾರಾಯಣ ಸ್ವಾಮಿ ಮತ್ತು ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ಮುಂದಿನ ವಿಚಾರಣೆ ವೇಳೆಗೆ ಈ ಕುರಿತಂತೆ ಮಾಹಿತಿ ಸಲ್ಲಿಸಿ’ ಎಂದು ಪ್ರತಿವಾದಿಗಳಾದ ವನ್ಯಜೀವಿ ಸಂರಕ್ಷಣಾ ಡಿಐಜಿ ಮತ್ತು ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗೆ ನ್ಯಾಯಪೀಠ ನಿರ್ದೇಶಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !