ಪೊಲೀಸ್ ಮಹಾಸಂಘದ ಅಧ್ಯಕ್ಷರ ವಿರುದ್ಧದ ವಿಚಾರಣೆಗೆ ತಡೆ

ಶನಿವಾರ, ಮಾರ್ಚ್ 23, 2019
24 °C

ಪೊಲೀಸ್ ಮಹಾಸಂಘದ ಅಧ್ಯಕ್ಷರ ವಿರುದ್ಧದ ವಿಚಾರಣೆಗೆ ತಡೆ

Published:
Updated:

ಬೆಂಗಳೂರು: ಪೊಲೀಸರ ಪ್ರತಿಭಟನೆಗೆ ಕರೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಧಿಸಿದ್ದ ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿದ ಪ್ರಕರಣದಲ್ಲಿ ಕರ್ನಾಟಕ ಪೊಲೀಸ್ ಮಹಾಸಂಘದ ಅಧ್ಯಕ್ಷ ವಿ.ಶಶಿಧರ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಎಫ್‌ಐಆರ್ ರದ್ದುಕೋರಿ ವಿ.ಶಶಿಧರ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಅಧೀನ ನ್ಯಾಯಾಲಯದ ವಿಚಾರಣೆ ಪ್ರಕ್ರಿಯೆಗೆ ತಡೆ ನೀಡಿತು. ಅಂತೆಯೇ ಕೇಂದ್ರ ಅಪರಾಧ ವಿಭಾಗಕ್ಕೆ (ಸಿಸಿಬಿ) ನೋಟಿಸ್ ಜಾರಿಗೊಳಿಸಲು ಆದೇಶಿಸಿತು. ವಿಚಾರಣೆ ಮುಂದೂಡಲಾಗಿದೆ.

ಇದನ್ನೂ ಓದಿ... ಪೊಲೀಸ್‌ ಮಹಾಸಂಘದ ಅಧ್ಯಕ್ಷ ವಶಕ್ಕೆ

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !