ಮಂಗಳವಾರ, ಅಕ್ಟೋಬರ್ 22, 2019
21 °C

ಟಿಡಿಆರ್‌: ಆರೋಪಿ ಕೃಷ್ಣಲಾಲ್‌ ಅರ್ಜಿ ವಜಾ

Published:
Updated:

ಬೆಂಗಳೂರು: ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಹಗರಣದ ಆರೋಪಿ ಎಸ್. ಕೃಷ್ಣಲಾಲ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖ ಲಿಸಿರುವ ಎಫ್‌ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಕುರಿತಂತೆ ಕೃಷ್ಣಲಾಲ್‌ ಸಲ್ಲಿಸಿದ್ದ ಅರ್ಜಿಯ ಮೇಲಿನ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಪಿ.ಎಸ್‌.ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ಪ್ರಕಟಿಸಿದೆ.

‘ಇದೊಂದು ಗಂಭೀರ ಪ್ರಕರಣ. ಅಸ್ತಿತ್ವದಲ್ಲಿಲ್ಲದ ಜಮೀನುಗಳಿಗೂ ಟಿಡಿಆರ್ ನೀಡಲಾಗಿದೆ. ಇದರಿಂದ ಸರ್ಕಾರದ ಖಜಾನೆಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗಿದೆ. ಅರ್ಜಿ ದಾರರು ಸರ್ಕಾರಿ ಅಧಿಕಾರಿಯಾಗಿದ್ದು, ಈ ಪ್ರಕರಣದಲ್ಲಿ ಯಾರೆಲ್ಲ ಇದ್ದಾರೆ ಎಂಬ ಅಂಶಗಳು ತನಿಖೆ ಪೂರ್ಣಗೊಂಡ ನಂತರವೇ ಬೆಳಕಿಗೆ ಬರಲಿವೆ. ಆದ್ದರಿಂದ ಪ್ರಕರಣ ರದ್ದುಪಡಿಸಬಾರದು’ ಎಂಬ ಎಸಿಬಿ ಪರ ವಕೀಲರ ವಾದವನ್ನು ನ್ಯಾಯಪೀಠ ಮಾನ್ಯ ಮಾಡಿದೆ.

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

Post Comments (+)