ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

7

ವಿಚಾರಣೆಯಿಂದ ಹಿಂದೆ ಸರಿದ ನ್ಯಾಯಮೂರ್ತಿ

Published:
Updated:

ಬೆಂಗಳೂರು: ‘ನಗರ ವ್ಯಾಪ್ತಿಯ ಕಸವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು’ ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಯಿಂದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಹಿಂದೆ ಸರಿದಿದ್ದಾರೆ.

ಈ ಕುರಿತ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು. ಈ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್‌ ‘ಪ್ರಕರಣದಲ್ಲಿ ಈ ಮೊದಲು ನಾನು ವಾದ ಮಂಡಿಸಿರುವ ಕಾರಣ ವಿಚಾರಣೆಯಿಂದ ಸರಿಯುತ್ತಿದ್ದೇನೆ’ ಎಂದು ತಿಳಿಸಿದರು.

ಇದರಿಂದಾಗಿ ಈ ಅರ್ಜಿಯನ್ನು ಬೇರೊಂದು ಪೀಠಕ್ಕೆ ವರ್ಗಾವಣೆ ಮಾಡುವಂತೆ ಮುಖ್ಯ ನ್ಯಾಯಮೂರ್ತಿಗಳು ಹೈಕೋರ್ಟ್‌ ರಿಜಿಸ್ಟ್ರಾರ್‌ ಅವರಿಗೆ ಸೂಚಿಸಿದರು.

ವರದಿ ಸಲ್ಲಿಕೆ: ಹೈಕೋರ್ಟ್ ಆದೇಶ ಪಾಲಿಸಿರುವ ಕುರಿತಂತೆ ಕರ್ನಾಟಕ ಗೊಬ್ಬರ ಅಭಿವೃದ್ಧಿ ನಿಗಮದ (ಕೆಸಿಡಿಸಿ) ಪರ ವಕೀಲರು ನ್ಯಾಯಪೀಠಕ್ಕೆ ವಸ್ತುಸ್ಥಿತಿ ಕುರಿತ ವರದಿ ಸಲ್ಲಿಸಿದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !